Suresh kumar

ಎಸ್ಎಸ್ಎಲ್'ಸಿ ಪರೀಕ್ಷೆ: ಒಂದು ಕೊಠಡಿಯಲ್ಲಿ 18-20 ವಿದ್ಯಾರ್ಥಿಗಳಿಗಷ್ಟೇ ಅವಕಾಶ!
ಕೊರೋನಾ ವೈರಸ್ ಭೀತಿಯಿಂದಾಗಿ ಪ್ರಸಕ್ತ ಸಾಲಿನ ಎಸ್ಎಸ್ಎಲ್'ಸಿ ಪರೀಕ್ಷೆ ವೇಳೆ ಒಂದು ಕೊಠಿಡಯಲ್ಲಿ 18-20 ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಜ್ಯೂನ್ 18ಕ್ಕೆ ಪಿಯುಸಿ, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್
ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಸಚಿವ ಸುರೇಶ್ ಕುಮಾರ್ ಕಾಳಜಿ: ಐರ್ಲೆಂಡ್ ನಿಂದ ಸುರಕ್ಷಿತವಾಗಿ ಬೆಂಗಳೂರು ತಲುಪಿದ ಕ್ಯಾನ್ಸರ್ ಪೀಡಿತೆ!
ಐರ್ಲೆಂಡ್ ನ ಎಂಎನ್ ಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ 25 ವರ್ಷದ ಕ್ಯಾನ್ಸರ್ ಪೀಡಿತ ಯುವತಿ ವಾಪಸ್ ತವರಿಗೆ ಮರಳಲು ಪರದಾಡುತ್ತಿದ್ದರು. ಆದರೆ ಯುವತಿ ನೆರವಿಗೆ ಧಾವಿಸಿದ ಸಚಿವ ಸುರೇಶ್ ಕುಮಾರ್ ಅವರು ಲಾಕ್ ಡೌನ್ ನಡುವೆಯೇ ಯುವತಿಯನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ.

ಎಲ್'ಕೆಜಿ, ಯುಕೆಜಿ ಮಕ್ಕಳಿಗೂ ಆನ್'ಲೈನ್ ಕೋಚಿಂಗ್ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ
ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬಹುದು, ಎಷ್ಟು ಶೈಕ್ಷಣಿಕ ದಿನಗಳು ಕಡಿಮೆ ಆಗುತ್ತದೆ ಎಂಬ ಬಗ್ಗೆ ಶಿಕ್ಷಣ ಇಲಾಖೆ ಅಧ್ಯಯನ ಮಾಡುತ್ತಿದೆ. ತರಗತಿಗಳನ್ನು ಪಾಳಿಯ ಆಧಾರದಲ್ಲಿ ನಡೆಸಬೇಕಾ ಅಥವಾ ಪರ್ಯಾಯ ವ್ಯವಸ್ಥೆ ಮಾಡಬೇಕಾ ಎಂಬ ಚರ್ಚೆಯೂ ನಡೆಯುತ್ತಿದೆ.

ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿದ ನಂತರ ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಸುರೇಶ್ ಕುಮಾರ್
ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಈಗಾಗಲೇ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿರುವುದರಿಂದ ಅದನ್ನು ನಿವಾರಿಸುವ ಸಲುವಾಗಿ ಸೋಮವಾರ ನಡೆಯುವ ಶಿಕ್ಷಣ ತಜ್ಞರುಗಳ ಸಭೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು.

ಮಾಹಿತಿ ಕೊರತೆಯಿಂದ ಕ್ವಾರಂಟೈನ್ ಗೊಂದಲ; ಹಿಂದಿರುಗಲು ಬಯಸಿದವರಿಗೆ ರೈಲು ವ್ಯವಸ್ಥೆ; ಸುರೇಶ್ ಕುಮಾರ್
ಕೆಲ ಮಾಹಿತಿಗಳ ಕೊರತೆಯಿಂದ ರೈಲಿನ ಮೂಲಕ ಬೆಂಗಳೂರಿಗೆ ಆಗಮಿಸಿದ ಕೆಲವರು ಕ್ವಾರಂಟೈನ್ ಗೆ ನಿರಾಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಅದನ್ನು ಸರಿಪಡಿಸಲಾಗುವುದು ಎಂದರು.

ಪ್ರಾಥಮಿಕ ತರಗತಿಯ ಮಕ್ಕಳಿಗೆ ಅನಗತ್ಯ ಆನ್ ಲೈನ್ ಶಿಕ್ಷಣ: ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ
ಲಾಕ್ ಡೌನ್ ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳು ಶೋಷಣೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ವಾರಿಯರ್ಸ್ ಗೆ ಪುಷ್ಪಾರ್ಚನೆ ಮೂಲಕ ಗೌರವಿಸಿದ ಸಚಿವ ಸುರೇಶ್ ಕುಮಾರ್!
ದಿನದಿಂದ ದಿನಕ್ಕೆ ಕೊರೋನಾ ತಂದೊಡ್ಡುತ್ತಿರುವ ಬಹುಮುಖಿ ಸವಾಲುಗಳನ್ನು ಎದುರಿಸಲು ಪ್ರತಿಯೊಬ್ಬರು ತಮ್ಮ ಆಚಾರ-ವಿಚಾರಗಳಲ್ಲಿ ಸಕಾರಾತ್ಮಕ ಬದಲಾವಣೆ ತಂದುಕೊಳ್ಳಬೇಕಾದ ಅಗತ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ

ವಲಸೆ ಕಾರ್ಮಿಕರ ವಿಚಾರದಲ್ಲಿ ಕರ್ನಾಟಕ ಯಾವುದೇ ಒತ್ತಡಕ್ಕೂ ಒಳಗಾಗಿಲ್ಲ: ಸಚಿವ ಸುರೇಶ್ ಕುಮಾರ್
ವಲಸೆ ಕಾರ್ಮಿಕರು ಕರೆದುಕೊಳ್ಳಲು ಇತರೆ ರಾಜ್ಯಗಳು ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಂಡಿರದ ಕಾರಣ ರಾಜ್ಯ ಸರ್ಕಾರ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಒತ್ತಡಕ್ಕೂ ಒಳಗಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

