Suresh kumar

ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುತ್ತದೆ ಹತಾಶರಾಗದಿರಿ, ದೂರದರ್ಶನದಲ್ಲಿ ಏಪ್ರಿಲ್ 29 ರಿಂದ ಪುನರ್ಮನನ ಪಾಠ: ಸುರೇಶ್ ಕುಮಾರ್
ಲಾಕ್‌ಡೌನ್ ಮುಗಿಯುವ ಮೇ 3ರ ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆ ಬರೆಯಲು ನಿರಂತರ ಅಧ್ಯಯನಶೀಲರಾಗಿರಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಎಸ್ಎಸ್ಎಲ್ ಸಿ ಮಕ್ಕಳಿಗೆ ಕರೆ ಮಾಡಿ ವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್
ಕೊರೋನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ಸ್ವತಃ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.

ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ 6500 ಕುಟುಂಬಗಳಿಗೆ ಅಕ್ಕಿ ವಿತರಣೆ: ಸಚಿವ ಸುರೇಶ್‍ಕುಮಾರ್
ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಹಾಗೂ ಕಾಡಂಚಿನ ಪ್ರದೇಶಗಳ 6500 ಕುಟುಂಬಗಳಿಗೆ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ತಲಾ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್: ಅಧಿಕಾರಿಗಳ ನಿರ್ಣಯಕ್ಕೆ ಸುರೇಶ್ ಕುಮಾರ್ ಗರಂ!
ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಹೊಸ ಪ್ರಯತ್ನ, ಮಕ್ಕಳ ಯುಟ್ಯೂಬ್ ಚಾನಲ್ ಪ್ರಾರಂಭಕ್ಕೆ ನಿರ್ಧಾರ: ಸುರೇಶ್ ಕುಮಾರ್
ಬೇಸಿಗೆ ರಜೆ, ಲಾಕ್ ಡೌನ್ ಹಿನ್ನಲೆಯಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಸಹಕಾರಿಯಾಗಲೆಂದೇ ಶಿಕ್ಷಣ ಇಲಾಖೆ ಹೊಸ ಪ್ರಯತ್ನಕ್ಕೆ ಮುಂದಾಗಿ ಪ್ರಪ್ರಥಮ ಪ್ರಯೋಗವಾಗಿ ಮಕ್ಕಳ ಯುಟ್ಯೂಬ್ ಚಾನಲ್ ಪ್ರಾರಂಭಿಸಲು ನಿರ್ಧರಿಸಿದೆ.

ಚಾಮರಾಜನಗರ ಸೇರಿ 9 ಜಿಲ್ಲೆಗಳು ಕೊರೋನ ಮುಕ್ತ: ಸುರೇಶ್ ಕುಮಾರ್
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ ಸದ್ಯಕ್ಕೆ ರಾಜ್ಯದಲ್ಲಿ ಚಾಮರಾಜನಗರವೂ ಸೇರಿದಂತೆ 9 ಜಿಲ್ಲೆಗಳು ಕೊರೊನಾ ಮುಕ್ತವಾಗಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೋನಾ ಪರೀಕ್ಷೆಯಲ್ಲಿ ಗೆದ್ದ ನಂತರವಷ್ಟೇ ಉಳಿದ ಪರೀಕ್ಷೆ: ಸಚಿವ ಸುರೇಶ್ ಕುಮಾರ್
ಲಾಕ್ ಡೌನ್ ಮುಗಿದ ನಂತರ ದಿಢೀರ್ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಘೋಷಣೆ ಮಾಡುವುದಿಲ್ಲ ಸರ್ಕಾರ ವಿದ್ಯಾರ್ಥಿ ಮತ್ತು ಶಿಕ್ಷಕರ ಹಿತ ಎರಡನ್ನೂ ಕಾಪಾಡಲು ಬದ್ದವಾಗಿದೆ ಎಂದು ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ಪುಣಜನೂರು ಚೆಕ್‌ಪೋಸ್ಟ್‌ಗೆ ಸಚಿವ ಸುರೇಶ್‌ಕುಮಾರ್ ದಿಢೀರ್ ಭೇಟಿ
ಗಡಿ ಜಿಲ್ಲೆ ಚಾಮರಾಜನಗರದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಪುಣಜನೂರು ಚೆಕ್‌ಪೋಸ್‌ಟ್ ಬಗ್ಗೆ ಕರ್ತವ್ಯ ಲೋಪದ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ದಿಢೀರ್ ಭೇಟಿ ನೀಡಿದರು.

ಹಂತ ಹಂತವಾಗಿ ಲಾಕ್‌ಡೌನ್ ತೆಗೆಯಲು ಎಲ್ಲರ ಸಹಕಾರ ಅಗತ್ಯ: ಸುರೇಶ್ ಕುಮಾರ್
ಏಪ್ರಿಲ್ 14ರ ಬಳಿಕ ಲಾಕ್ ಡೌನ್ ಅನ್ನು ಹಂತ ಹಂತವಾಗಿ ತೆಗೆಯುವ ಬಗ್ಗೆ ನಿರ್ಧಾರ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದು, ಅದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು...

