Suresh kumar

'ಪಕ್ಕೆಲುಬು' ವಿಡಿಯೋ ಹರಿಬಿಟ್ಟ ಶಿಕ್ಷಕನ ವಿರುದ್ಧ ಗರಂ ಆದ ಶಿಕ್ಷಣ ಸಚಿವ: ಶಾಲೆ ಪತ್ತೆಗೆ ಸೈಬರ್ ಠಾಣೆಗೆ ದೂರು
ಶಾಲೆಯಲ್ಲಿ ಶಿಕ್ಷಕರೊಬ್ಬರು ಹೇಳಿಕೊಡುವ ಪಕ್ಕೆಲುಬು ಎಂಬ ಪದವನ್ನು ಉಚ್ಚರಿಸಲು ಕಷ್ಟಪಡುವ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

7ನೇ ತರಗತಿಗೆ ಪಬ್ಲಿಕ್ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ; ಸುರೇಶ್ ಕುಮಾರ್
ಏಳನೇ ತರಗತಿಯ ಪಬ್ಲಿಕ್ ಪರೀಕ್ಷೆ ವಿವಾದಕ್ಕೆ ಕೊನೆಗೂ ತೆರೆ ಎಳೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಯ ಬದಲಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಸಕಾಲ ಮಾದರಿಯಲ್ಲೇ ಆರ್.ಟಿ.ಐ. ಸೇವೆಗಳೂ ಆನ್-ಲೈನ್ ನಲ್ಲಿ ಲಭ್ಯ: ಸಚಿವ ಸುರೇಶ್ ಕುಮಾರ್
ನಾಗರೀಕರಿಗೆ ನಿಗದಿತ ಅವಧಿಯಲ್ಲಿ ಸೇವೆ ದೊರೆಯುವಂತೆ ಮಾಡಲು 'ಸಕಾಲ'ಸೇವೆಗಳನ್ನು ಆನ್ ಲೈನ್ ಗೊಳಿಸಿದ ಮಾದರಿಯಲ್ಲೇ ಮಾಹಿತಿ ಹಕ್ಕು ಅಧಿನಿಯಮ-ಆರ್.ಟಿ.ಐ. ಸೇವೆಗಳನ್ನೂ ಸಹ ಆನ್-ಲೈನ್ ವ್ಯವಸ್ಥೆಗೆ ತರುವುದಾಗಿ ಪ್ರಾಥಮಿಕ, ಪ್ರೌಢಶಿಕ್ಷಣ, ಕಾರ್ಮಿಕ ಮತ್ತು ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಚಿವಾಲಯದ ಸೇವೆಗಳನ್ನೂ ಸಕಾಲದಡಿ ತರಲು ನಿರ್ಧಾರ- ಸಚಿವ ಸುರೇಶ್ ಕುಮಾರ್
ವಿಧಾನಸೌಧ - ವಿಕಾಸ ಸೌಧದ ಸಚಿವಾಲಯಗಳ ಸೇವೆಗಳನ್ನೂ ಸಕಾಲ ಯೋಜನೆ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸಮಿತಿ ವರದಿ ಬಂದ ಬಳಿಕ 'ಶಾಲಾ ಪಠ್ಯಕ್ಕೆ ಟಿಪ್ಪು ಪಾಠ' ಕುರಿತ ಅಂತಿಮ ನಿರ್ಧಾರ: ಸಚಿವ ಸುರೇಶ್ ಕುಮಾರ್
ಟಿಪ್ಪು ಸುಲ್ತಾನ್ ಕುರಿತ ಪಾಠವನ್ನು ಶಾಲಾ ಮಕ್ಕಳ ಪಠ್ಯಕ್ಕೆ ಸೇರಿಸುವ ಕುರಿತು ಸಮಿತಿ ವರದಿ ಬಂದ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಿಕ್ಷಕಿ ಮೇಲೆ ಎಸ್ ಡಿ ಎಮ್ ಸಿ ಅಧ್ಯಕ್ಷನಿಂದ ಹಲ್ಲೆ; ವಜಾಗೊಳಿಸಲು ಸುರೇಶ್ ಕುಮಾರ್ ಆದೇಶ
ಶಿಕ್ಷಕಿಗೆ ಕಿರುಕುಳ ನೀಡಿದ ಆಪಾದನೆ ಹಿನ್ನೆಲೆಯಲ್ಲಿ ಜಿಲ್ಲೆಯ ಉಪ್ಪುಂದ ಗ್ರಾಮದ ಸರ್ಕಾರಿ ಹಿರಿಯ ಉರ್ದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರನ್ನು ವಜಾಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ.

ಸುಳ್ವಾಡಿ ಮಾರಮ್ಮನ ದೇಗುಲದ ಬಾಗಿಲು ತೆರೆಯುವಂತೆ ಗೋಳಾಡಿದ ಭಕ್ತರು
ಕಳೆದ ಡಿಸೆಂಬರ್‌ನಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ ಸುಳ್ವಾಡಿ ವಿಷ ಪ್ರಸಾದ ದುರಂತದ ಕೇಂದ್ರ ಬಿಂದು ಕಿಚ್ಚುಗುತ್ತಿ ಮಾರಮ್ಮ ದೇಗುಲದ ಬಾಗಿಲು ತೆರೆಯುವಂತೆ ಭಕ್ತರು ಗೋಳಾಡಿದ್ದಾರೆ.

ಶಿಕ್ಷಕ ಸಮುದಾಯಕ್ಕೆ ಸಾಂದರ್ಭಿಕ ರಜೆ 15ಕ್ಕೆ ಹೆಚ್ಚಿಸುವಂತೆ ಸಿಎಂ ಯಡಿಯೂರಪ್ಪಗೆ ಸುರೇಶ್ ಕುಮಾರ್ ಪತ್ರ
ಶಿಕ್ಷಕ ಸಮುದಾಯಕ್ಕೆ ಅನ್ವಯವಾಗುವಂತೆ ೧೫ ದಿನಗಳ ಸಾಂದರ್ಭಿಕ ರಜೆಗಳನ್ನು ಮೊದಲಿನಂತೆ ಮುಂದುವರೆಸಬೇಕು. ಇದಕ್ಕಾಗಿ ಸರ್ಕಾರದ ರಜಾ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲು ಕ್ರಮಕೈಗೊಳ್ಳಬೇಕು...

ಭರಚುಕ್ಕಿ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್: ವಿಶ್ವ ದರ್ಜೆಯ ಬಯೋ ಡೈವರ್ಸಿಟಿ ಪಾರ್ಕ್!
ಅದು ಗಡಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದು. ಅದನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ಒಂದು ಮಾಸ್ಟರ್ ಪ್ಲಾನ್ ರೆಡಿಯಾಗಿದೆ. ಅರೆ, ಯಾವುದಪ್ಪಾ ಅದು ಅಂತೀರಾ. ಇಲ್ಲಿದೆ ನೋಡಿ ಅದರ ಕಂಪ್ಲೀಟ್ ಡೀಟೈಲ್ಸ್.

