Suresh kumar

ಶಿಕ್ಷಣ ಸಚಿವರು ನನ್ನೊಂದಿಗೆ ಚರ್ಚಿಸಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿ: ಯಡಿಯೂರಪ್ಪ
ಶಿಕ್ಷಣ ಸಚಿವ ಎಸ್. ಸುರೆಶ್ ಕುಮಾರ್ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ

ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕ ಘೋಷಣೆ ಮಾಡಲಾಗಿದೆ: ಎಸ್. ಸುರೇಶ್ ಕುಮಾರ್
ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕಗಳ ಘೋಷಣೆ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳ ಅನುಮತಿ ಕೂಡ ಪಡೆಯಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಶಾಲೆಗಳ ಆರಂಭ ಕುರಿತು ಸೋಮವಾರ ಅಂತಿಮ ತೀರ್ಮಾನ: ಸಚಿವ ಸುರೇಶ್ ಕುಮಾರ್
ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಸೋಮವಾರ ತಜ್ಞರ ಸಭೆ ಕರೆಯಲಾಗಿದೆ.ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಸೋಮವಾರದಂದು ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂಟರ್ನೆಟ್ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿಗಳಿಗೆ ಸುರೇಶ್ ಕುಮಾರ್ ಮನವಿ
ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ಮತ್ತು ನೆಟ್ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಜುಲೈ 1 ರಿಂದ ಚಂದನದಲ್ಲಿ ವಿದ್ಯಾರ್ಥಿಗಳಿಗೆ ವಿಡಿಯೋ ಪಾಠ ಪ್ರಸಾರ
ಹೊಸ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಸನ್ನಿವೇಶದಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳು ಬಲಿಷ್ಠಗೊಳ್ಳಬೇಕು ಈ ನಿಟ್ಟಿನಲ್ಲಿ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಗಳು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಗಮನಹರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೋಮವಾರ ಹೇಳಿದ್ದಾರೆ.

ರಾಜ್ಯದಲ್ಲಿ 2 ತಿಂಗಳು ಪ್ರತಿ ವಿದ್ಯಾರ್ಥಿಗೂ ಕೆನೆಭರಿತ ಹಾಲಿನ ಪುಡಿ ವಿತರಣೆ!
ಪ್ರಸಕ್ತ ಸಾಲಿನ ಜೂನ್ ಮತ್ತು ಜುಲೈ ತಿಂಗಳಲ್ಲಿ (ಎರಡು ತಿಂಗಳು) ಪ್ರತಿ ಶಾಲಾ ವಿದ್ಯಾರ್ಥಿಗೆ ಆಹಾರಧಾನ್ಯದ ಜೊತೆಗೆ ತಲಾ ಅರ್ಧ ಕಿಲೋ ಕೆನೆಭರಿತ ಹಾಲಿನ ಪುಡಿ ವಿತರಿಸಲು ಶಿಕ್ಷಣ ಇಲಾಖೆಯು 163.71 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

148 ದೈಹಿಕ ಶಿಕ್ಷಕರ ಮುಂಬಡ್ತಿಗೆ ಅಸ್ತು: ಸುರೇಶ್ ಕುಮಾರ್
ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಲಾಕ್ ಡೌನ್ ಪೂರ್ಣಗೊಂಡ ತಕ್ಷಣ ಶಾಲೆಗಳಿಗೆ ಶಿಕ್ಷಕರ ಭೌತಿಕ ಹಾಜರಿಗೆ ಸೂಚನೆ: ಸುರೇಶ್ ಕುಮಾರ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್ ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಕ್ಕಳಲ್ಲಿ ಭಯವನ್ನಲ್ಲ, ಆತ್ಮವಿಶ್ವಾಸ ತುಂಬೋಣ; ಸಂದರ್ಶನದಲ್ಲಿ ಸಚಿವ ಸುರೇಶ್ ಕುಮಾರ್
ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸುವ ನಿರ್ಧಾರವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮರ್ ಅವರು ಸಮರ್ಥಿಸಿಕೊಂಡಿದ್ದು, ತಜ್ಞರು ಹಾಗೂ ಸಂಬಂಧಪಟ್ಟವರಿಂದ ಪ್ರತಿಕ್ರಿಯೆ ಪಡೆದೇ ವಿದ್ಯಾರ್ಥಿಗಳ ಹಿತಾಸಕ್ತಿ ದೃಷ್ಟಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

