ರಾಜ್ಯಬಂಧಿತ ಐವರು ಶಂಕಿತ ಉಗ್ರರು ಬೆಂಗಳೂರು ನಗರದಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು: ಮಾಹಿತಿ ಬಿಚ್ಚಿಟ್ಟ ನಗರ ಪೊಲೀಸ್ ಆಯುಕ್ತರು
ರಾಜ್ಯ ರಾಜಧಾನಿ ಬೆಂಗಳೂರಿಗರನ್ನು ಬುಧವಾರ ಬೆಳ್ಳಂಬೆಳಗ್ಗೆ ಆಘಾತಕಾರಿ ಸುದ್ದಿಯೊಂದು ಬೆಚ್ಚಿಬೀಳಿಸಿದೆ. ನಿಖರ ಮಾಹಿತಿ ಪಡೆದು ನಗರ ಅಪರಾಧ ವಿಭಾಗ ಪೊಲೀಸರು(City crime branch) ಐವರು ಶಂಕಿತ ಉಗ್ರರನ್ನು ಬಂಧಿಸಿದ್ದು ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ.