suspend

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಕೃಷ್ಣಪ್ಪ.ಜಿ ವಿರುದ್ಧ ದೈವದ ಮೊರೆ ಹೋದ ಕಾಂಗ್ರೆಸ್ ಮುಖಂಡರು!
ವಿಧಾನಸಭಾ ಚುನಾವಣೆ ವೇಳೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತು ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು, ಇದೀಗ ದೈವದ ಮೊರೆ ಹೋಗಿದ್ದಾರೆ.

ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ : ವಿವಿ ಪುರಂ ಪೊಲೀಸ್ ಕಾನ್ಸ್‌ಟೇಬಲ್ ಸಸ್ಪೆಂಡ್ !
ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾತ್ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಪೊಲೀಸ್ ಮುಖ್ಯ ಪೇದೆಯನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

ಕರ್ತವ್ಯದಲ್ಲಿದ್ದಾಗ ಪಾನಮತ್ತರಾಗಿ ಸಾರ್ವಜನಿಕರೊಂದಿಗೆ ದುರ್ನಡತೆ: ಮೂವರು ಪೊಲೀಸರ ಅಮಾನತು
ಕರ್ತವ್ಯನಿರತ ಪೊಲೀಸರು ಮದ್ಯಪಾನ ಮಾಡಿ ಸಾರ್ವಜನಿಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ದುರ್ನಡತೆ ತೋರಿದ ಹಿನ್ನೆಲೆಯಲ್ಲಿ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಶುಕ್ರವಾರ ಅಮಾನತು ಮಾಡಿದ್ದಾರೆ.

ಅಕ್ರಮವಾಗಿ ಮರಗಳನ್ನು ಕಡಿದ ಆರೋಪ: ವಿರಾಜಪೇಟೆ ವಿಭಾಗದ ಡಿಸಿಎಫ್ ಆಗಿದ್ದ ಚಕ್ರಪಾಣಿ ಅಮಾನತು
ಕೋಟ್ಯಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದ ಆರೋಪದ ಮೇಲೆ ವಿರಾಜಪೇಟೆ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ (ಡಿಸಿಎಫ್), ಸದ್ಯ ಬೆಂಗಳೂರು ನಗರ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ವೈ ಚಕ್ರಪಾಣಿ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿ ಆದೇಶ ಹೊರಡಿಸಿದೆ.

ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೂವರು ಸಾವು ಪ್ರಕರಣ; ಇಬ್ಬರು ಪಿಡಿಒಗಳ ಅಮಾನತು
ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವಿಗೀಡಾದ ಮತ್ತು ನೂರಾರು ಜನರು ಅಸ್ವಸ್ಥರಾದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಬಿಜಕಲ್ ಮತ್ತು ಬಸರಿಹಾಳ್ ಗ್ರಾಮಗಳ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿದೆ.

ಕಲಬುರಗಿ: ಟ್ರ್ಯಾಕ್ಟರ್ ಹರಿಸಿ ಪೇದೆ ಹತ್ಯೆ; ಕರ್ತವ್ಯ ಲೋಪ ಎಸಗಿದ ಮೂವರು ಪೊಲೀಸ್ ಅಧಿಕಾರಿಗಳ ಅಮಾನತು
ಕಲಬುರಗಿ ಜಿಲ್ಲೆಯಲ್ಲಿ ಮರಳು ಮಾಫಿಯಾವೊಂದು ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಕೆಲವೇ ದಿನಗಳ ನಂತರ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಅಜ್ಮೀರ್: ಹೋಟೆಲ್ ಸಿಬ್ಬಂದಿಗೆ ಥಳಿತ; ಐಎಎಸ್-ಐಪಿಎಸ್ ಅಧಿಕಾರಿ ಸೇರಿ 7 ಮಂದಿ ಅಮಾನತು
ಅಜ್ಮೀರ್ ಹೆದ್ದಾರಿಯಲ್ಲಿರುವ ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಐಪಿಎಸ್ ಅಧಿಕಾರಿ ಸುಶೀಲ್ ಕುಮಾರ್ ವಿಷ್ಣೋಯ್ ಮತ್ತು ಐಎಎಸ್ ಗಿರ್ಧರ್ ಅವರನ್ನು ಅಮಾನತುಗೊಳಿಸಲಾಗಿದೆ.

ಅಪಾರ್ಟ್‌ಮೆಂಟ್‌ಗಾಗಿ ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ: ಅಧಿಕಾರಿಗಳ ಅಮಾನತಿಗೆ ಡಿಕೆ ಶಿವಕುಮಾರ್ ಆದೇಶ
ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿಯಲ್ಲಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.

ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತು
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ.

