suspend

ಕರ್ತವ್ಯ ಲೋಪ: ಕಂದಾಯ ಇಲಾಖೆಯ 6 ಮಂದಿ ಅಧಿಕಾರಿಗಳು ಅಮಾನತು
ಕರ್ತವ್ಯ ಲೋಪ ಆರೋಪದಡಿ ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಆರು ಮಂದಿ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಮುನೀಷ್ ಮುದ್ಗಿಲ್ ಆದೇಶ ಹೊರಡಿಸಿದ್ದಾರೆ.

ನೀರೆತ್ತುವ ಯೋಜನೆಗೆ ಚಾಲನೆ ನೀಡುವ ವೇಳೆ ಕರೆಂಟ್ ಕಟ್: ಮುಜುಗರಕ್ಕೊಳಗಾದ ಸಿಎಂ; ಚೆಸ್ಕಾಂ ಎಂಡಿ ಅಮಾನತು
ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ವಿದ್ಯುತ್ ಕಟ್ ಆಗಿದ್ದರಿಂದ ಮುಖ್ಯಮಂತ್ರಿಗಳು ಮುಜುಗರಕ್ಕೊಳಗಾದ ಸನ್ನಿವೇಶ ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆದಿದೆ.

ಕಾಂಗ್ರೆಸ್ ಮಾಜಿ ಶಾಸಕನ ರಾಸಲೀಲೆ ವಿಡಿಯೋ ವೈರಲ್, ಪಕ್ಷದಿಂದ ಅಮಾನತು
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೇವಾರಂ ಜೈನ್ ಅವರನ್ನು ರಾಜಸ್ಥಾನ ಕಾಂಗ್ರೆಸ್ ಅಮಾನತು ಮಾಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಶನಿವಾರ ತಡರಾತ್ರಿ ಅಮಾನತು ಮಾಡಿ ಆದೇಶಿಸಿದ್ದಾರೆ.

ರಾಷ್ಟ್ರೀಯ ಕುಸ್ತಿ ಫೆಡರೇಷನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ ಸರ್ಕಾರ
ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.

ಅಮಾನತುಗೊಂಡ 141 ಸಂಸದರು ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿ ಪ್ರವೇಶಿಸದಂತೆ ಲೋಕಸಭೆ ಸಚಿವಾಲಯ ಸುತ್ತೋಲೆ
ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ಅಮಾನತುಗೊಂಡ ಸಂಸದರಿಗೆ ಲೋಕಸಭೆ ಸಚಿವಾಲಯ ನೋಟಿಸ್ ಜಾರಿ ಮಾಡಿದೆ. ಲೋಕಸಭೆಯಿಂದ ಮತ್ತು ರಾಜ್ಯಸಭೆಯಿಂದ ಅಮಾನತುಗೊಂಡ ಒಟ್ಟು 141 ಸಂಸದರು ಸಂಸತ್ತಿನ ಚೇಂಬರ್, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸದಂತೆ ಸುತ್ತೋಲೆಯಲ್ಲಿ ತಿಳಿಸಿದೆ.

ಮತ್ತೆ 49 ಸಂಸದರು ಲೋಕಸಭೆಯಿಂದ ಅಮಾನತು, ಒಟ್ಟು ಸಂಖ್ಯೆ 173!
ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಮಂಗಳವಾರ ಮತ್ತೆ ಭದ್ರತಾ ಉಲ್ಲಂಘನೆ ಪ್ರಕರಣದ ಗದ್ದಲ, ಕೋಲಾಹಲ ಮುಂದುವರಿದಿದೆ.

ಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ದುರ್ಬಳಕೆ: ಇನ್ಸ್‌ಪೆಕ್ಟರ್ ಅಮಾನತು, ಸಹಾಯಕನ ಬಂಧನ
ಸುಳ್ಳು ಪ್ರಕರಣ ಸೃಷ್ಟಿಸಿ 72 ಲಕ್ಷ ರೂಪಾಯಿ ಲಪಟಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇನ್ಸ್‌ಪೆಕ್ಟರ್ ಸಹಾಯಕನನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಇದೇ ವೇಳೆ ಆರೋಪ ಹೊತ್ತಿರುವ ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ಅವರೂ ಅಮಾನತುಗೊಂಡಿದ್ದಾರೆಂದು ತಿಳಿದುಬಂದಿದೆ.

ಉಡುಪಿ: ಲಂಚ ಪಡೆದ ಆರೋಪದ ಮೇಲೆ ಸಬ್‌ಇನ್ಸ್‌ಪೆಕ್ಟರ್ ಅಮಾನತು
ಲಂಚ ಪಡೆದ ಆರೋಪದ ಮೇಲೆ ಉಡುಪಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ.

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರ ಅಮಾನತು
ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಶಿಕ್ಷಣ ಇಲಾಖೆ ಶನಿವಾರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದೆ.

