suspension

ಶೇ.60ರಷ್ಟು ಕನ್ನಡ ಕಡ್ಡಾಯ ನೀತಿ ಅನುಷ್ಠಾನದಲ್ಲಿ ವಿಫಲ: ಬಿಬಿಎಂಪಿ ಅಧಿಕಾರಿ ಅಮಾನತು!
ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ನೀತಿಯನ್ನು ಅನುಷ್ಠಾನ ಮಾಡುವಲ್ಲಿ ವಿಫಲವಾದ ಆರೋಪದ ಮೇರೆಗೆ ಬಿಬಿಎಂಪಿ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.

ರೈತರ ಪ್ರತಿಭಟನೆ: ಪಂಜಾಬ್‌ನಲ್ಲಿ ಫೆ.24ರವರೆಗೆ ಇಂಟರ್‌ನೆಟ್ ಸೇವೆ ಸ್ಥಗಿತ!
ರೈತರ ‘ದೆಹಲಿ ಚಲೋ’ ಜಾಥಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಪಟಿಯಾಲ, ಸಂಗ್ರೂರ್ ಮತ್ತು ಫತೇಘರ್ ಸಾಹಿಬ್ ಸೇರಿದಂತೆ ಕೆಲವು ಪಂಜಾಬ್ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತವನ್ನು ಫೆಬ್ರವರಿ 24 ರವರೆಗೆ ವಿಸ್ತರಿಸಲಾಗಿದೆ

ಮರಳು ಮಾಫಿಯಾಕ್ಕೆ ನೆರವು ನೀಡಿದ ಆರೋಪ: ಕಂಕನಾಡಿ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು
ಮರಳು ಮಾಫಿಯಾಕ್ಕೆ ಅಕ್ರಮದಲ್ಲಿ ನೆರವು ನೀಡಿದ ಆರೋಪದ ಮೇಲೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ.

ನೂತನ ಆಡಳಿತ ಮಂಡಳಿ ಅಮಾನತು ಪ್ರಶ್ನಿಸಿ ಮುಂದಿನ ವಾರ ಕೋರ್ಟ್ ಮೆಟ್ಟಿಲೇರಲಿದೆ WFI
ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ)ನ ಆಡಳಿತ ಮಂಡಳಿಯನ್ನು ಅಮಾನತು ಮಾಡಿರುವ ಕೇಂದ್ರ ಕ್ರೀಡಾ ಸಚಿವಾಲಯದ ಕ್ರಮ ಪ್ರಶ್ನಿಸಿ ಮುಂದಿನ ವಾರ ನ್ಯಾಯಾಲಯದ ಮೊರೆ ಹೋಗಲು ಡಬ್ಲ್ಯುಎಫ್‌ಐ ನಿರ್ಧರಿಸಿದೆ ಮತ್ತು ಮುಂದಿನ ನಡೆ...

ಸಂಸದರ ಅಮಾನತನ್ನು ಆಡಳಿತ ಪಕ್ಷ ಅಸ್ತ್ರವಾಗಿಸಿಕೊಂಡಿದೆ: ಸಭಾಪತಿಗೆ ಪತ್ರದ ಮೂಲಕ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ
ಆಡಳಿತಾರೂಢ ಪಕ್ಷ ಪ್ರಜಾಪ್ರಭುತ್ವವನ್ನು ನಾಶಪಡಿಸಲು, ಸಂಸತ್ತಿನ ನಿಯಮಗಳನ್ನು ಹಾಳುಮಾಡಲು ಸಂಸದರ ಅಮಾನತನ್ನು ಅಸ್ತ್ರವಾಗಿಸಿಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಹೇಳಿದ್ದಾರೆ.

ಪ್ರಶ್ನೆ ಕೇಳುವುದು ಹೇಗೆ ಸಂಸತ್ ನ ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ?: ಸಂಸದ ಡ್ಯಾನಿಶ್ ಅಲಿ
49 ವಿಪಕ್ಷ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡ್ಯಾನಿಶ್ ಅಲಿ ಪ್ರತಿಕ್ರಿಯೆ ನೀಡಿದ್ದು, ಪ್ರಶ್ನೆ ಕೇಳುವುದು ಹೇಗೆ ಸಂಸತ್ ನ ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ? ಎಂದು ಕೇಳಿದ್ದಾರೆ.

ಅಶಿಸ್ತಿನ ನಡವಳಿಕೆ: ತೃಣಮೂಲ ಸದಸ್ಯ ಡೆರೆಕ್ ಒ'ಬ್ರಿಯಾನ್ ರಾಜ್ಯಸಭೆಯಿಂದ ಅಮಾನತು
ತೃಣಮೂಲ ಸಂಸದ ಡೆರೆಕ್ ಒ'ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಇಂದು ಗುರುವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ನಿನ್ನೆ ಲೋಕಸಭೆಯಲ್ಲಿನ ಪ್ರಮುಖ ಭದ್ರತಾ ಲೋಪದ ಬಗ್ಗೆ ಸದಸ್ಯರು ಪ್ರಸ್ತಾಪಿಸಿದರು. ಈ ವೇಳೆ ತೀವ್ರ ಗದ್ದಲ, ಕೋಲಾಹಲವುಂಟಾಯಿತು.

ಲೋಕಸಭೆಯಿಂದ ಅಧೀರ್ ರಂಜನ್ ಚೌಧರಿ ಅಮಾನತು: ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ
ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ಅಮಾನತುಗೊಳಿಸಿರುವ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಶುಕ್ರವಾರ ಬೆಳಗ್ಗೆ ಪಕ್ಷದ ಸಂಸದರ ಸಭೆ ಕರೆದಿದ್ದಾರೆ.

10 ಮಂದಿ ಬಿಜೆಪಿ ಶಾಸಕರ ಅಮಾನತು: ಕಲಾಪ ಬಹಿಷ್ಕರಿಸಿ ಬಿಜೆಪಿ ಶಾಸಕರ ಪ್ರತಿಭಟನೆ, ರಾಜ್ಯಪಾಲರಿಗೆ ದೂರು
ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಸದನದಿಂದ ಅಮಾನತು ಮಾಡಿರುವುದು ಖಂಡಿಸಿ ವಿಧಾನಸೌಧ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಇಂದು ಬಿಜೆಪಿ ಶಾಸಕರು ಧರಣಿ ನಡೆಸಿದರು. ಬಸವರಾಜ ಬೊಮ್ಮಾಯಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ

