suspension

ನಾಲ್ಕು ಜನರನ್ನು ಬಲಿ ಪಡೆದ ಲಖನೌ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ ಆದಿತ್ಯನಾಥ್
ನಿರ್ಲಕ್ಷ್ಯ ಮತ್ತು ಅಕ್ರಮಗಳಿಗಾಗಿ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಭಾರಿ ಪ್ರಮಾಣದ ಹಣದೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ನಾಯಕರ ಅಮಾನತು
ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಜಾರ್ಖಂಡ್ ಕಾಂಗ್ರೆಸ್‌ನ ಕಾರ್ಯದರ್ಶಿ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಲಾಪಕ್ಕೆ ಅಡ್ಡಿ: ಎಎಪಿಯ ಇಬ್ಬರು ಸೇರಿ ಮೂವರು ಸದಸ್ಯರು ರಾಜ್ಯಸಭೆಯಿಂದ ಅಮಾನತು
‘ಅಶಿಸ್ತಿನ ನಡವಳಿಕೆಗಾಗಿ’ಗಾಗಿ ಇದುವರೆಗೆ 23 ವಿರೋಧ ಪಕ್ಷದ ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಪಕ್ಷೇತರ ಸಂಸದ ಅಜಿತ್ ಕುಮಾರ್ ಭುಯಾನ್ ಸೇರಿದಂತೆ ಆಮ್ ಆದ್ಮಿ ಪಕ್ಷದ ಸುಶೀಲ್ ಕುಮಾರ್ ಗುಪ್ತಾ ಹಾಗೂ ಸಂದೀಪ್ ಕುಮಾರ್ ಪಾಠಕ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

'ನಾವು ಯಾವುದೇ ತಪ್ಪು ಮಾಡಿಲ್ಲ': ಕ್ಷಮೆಯಾಚಿಸಲು ನಿರಾಕರಿಸಿದ ಅಮಾನತುಗೊಂಡ ಪ್ರತಿಪಕ್ಷ ಸಂಸದರು
ಅಶಿಸ್ತಿನ ನಡವಳಿಕೆ ಮತ್ತು ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದರು ಎನ್ನುವ ಆರೋಪದ ಮೇಲೆ ಅಮಾನತುಗೊಂಡಿರುವ ವಿರೋಧ ಪಕ್ಷಗಳ 24 ಸದಸ್ಯರು ನಾವು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಅಮಾನತು ಆದೇಶ ಹಿಂಪಡೆಯಲು ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.

ವಿಷಾದ ವ್ಯಕ್ತಪಡಿಸಿದರೆ ಮಾತ್ರ ಅಮಾನತು ಆದೇಶ ಹಿಂಪಡೆಯುವಿಕೆ ಪರಿಗಣನೆ: ವೆಂಕಯ್ಯ ನಾಯ್ಡು
ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 19 ಸದಸ್ಯರ ಅಮಾನತು ಮಾಡಿರುವ ಬೆನ್ನಲ್ಲೇ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು, ಅಮಾನತುಗೊಂಡಿರುವ ಎಲ್ಲ ಸದಸ್ಯರು ವಿಷಾದ ವ್ಯಕ್ತಪಡಿಸಿದರೆ ಮಾತ್ರ ಅಮಾನತು ಹಿಂತೆಗೆದುಕೊಳ್ಳುವಿಕೆಯನ್ನು ಪರಿಗಣಿಸಬಹುದು ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಚಳಿಗಾಲ ಅಧಿವೇಶನ: 12 ಸಂಸದರ ಅಮಾನತು ಸಮರ್ಥಿಸಿಕೊಂಡ ವೆಂಕಯ್ಯ ನಾಯ್ಡು, ಸದನ ಬಹಿಷ್ಕರಿಸಿ ಪ್ರತಿಪಕ್ಷಗಳಿಂದ ಪ್ರತಿಭಟನೆ
ಮುಂಗಾರು ಅಧಿವೇಶನದ ವೇಳೆಯಲ್ಲಿ 12 ರಾಜ್ಯಸಭಾ ಸಂಸದರ ಅಮಾನತುಗೊಳಿಸಿದ್ದನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಮಂಗಳಾರ ಸಮರ್ಥಿಸಿಕೊಂಡಿದ್ದು, ಅಮಾನತು ಆದೇಶ ಹಿಂಪಡೆಯಬೇಕೆಂಬ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದಾರೆ.

ರಾಜ್ಯಸಭೆಯ 12 ಸಂಸದರ ಅಮಾನತು: ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ಪ್ರತಿಪಕ್ಷಗಳ ಸಭೆ
ಅನುಚಿತ ವರ್ತನೆಯಿಂದಾಗಿ ರಾಜ್ಯಸಭೆಯ 12 ಸದಸ್ಯರನ್ನು ಅಮಾನತು ಮಾಡಲಾಗಿದ್ದು, ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಪ್ರತಿಪಕ್ಷಗಳ ಸಭೆಯನ್ನು ಕರೆಯಲಾಗಿದೆ.

ಕೋವಿಡ್-19: ಆಗಸ್ಟ್ 31ರ ವರೆಗೆ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಮುಂದುವರಿಕೆ
ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.

ಕೋವಿಡ್-19: ಜೂನ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ
ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.

