ರಾಜ್ಯಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಯೋಜನೆಗೆ ಮಾ.23ಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ತಿಂಗಳ 23 ರಂದು ಚಾಲನೆ ನೀಡಲಿದ್ದಾರೆ. ಈ ಕುರಿತು ಇಂದು ಮುಖ್ಯಮಂತ್ರಿಯವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಘಗಳ ರಚನೆಯ ಪ್ರಗತಿಯ ಕುರಿತು ಮಾಹಿತಿ ಪಡೆದರು.