ರಾಜ್ಯದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಒಪ್ಪಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ಆಕ್ಷೇಪ
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗೆ ಸಂಬಂಧಿಸಿದ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ (KIOCL) ಕಡತಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಒಪ್ಪಿಗೆ ನೀಡಿ, ಕಡತಕ್ಕೆ ಸಹಿ ಹಾಕಿರುವುದಕ್ಕೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.