Swati Maliwal

ನ್ಯಾಯ ಸಿಗಲಿದೆ: ಬಿಭವ್ ಕುಮಾರ್ ಜಾಮೀನಿನ ನಂತರ ಸುನೀತಾ ಕೇಜ್ರಿವಾಲ್ ಪೋಸ್ಟ್ ಗೆ ಸ್ವಾತಿ ಮಲಿವಾಲ್ ಟಾಂಗ್
ಬಿಭವ್ ಕುಮಾರ್ ಜಾಮೀನು ಪಡೆದ ನಂತರ ಹಲ್ಲೆಗೊಳಗಾದ ಸಮಯದಲ್ಲಿ ಮನೆಯಲ್ಲಿದ್ದ ದೆಹಲಿ ಮುಖ್ಯಮಂತ್ರಿಯ ಪತ್ನಿಗೆ, "ತುಂಬಾ ಸಮಾಧಾನ"ವಾಗಿದೆ ಎಂದು ಸ್ವಾತಿ ಮಲಿವಾಲ್ ಅವರು ಹೇಳಿದ್ದಾರೆ.

ಹಲ್ಲೆ ಪ್ರಕರಣದ ಬಗ್ಗೆ ಚರ್ಚಿಸಲು ಸಮಯ ಕೋರಿ ಇಂಡಿಯಾ ಬ್ಲಾಕ್ ಗೆ ಸ್ವಾತಿ ಮಲಿವಾಲ್ ಪತ್ರ
ತಮ್ಮ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಕುರಿತು ಚರ್ಚಿಸಲು ಸಮಯ ಕೋರಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮಂಗಳವಾರ ಇಂಡಿಯಾ ಬ್ಲಾಕ್ ನಾಯಕರಿಗೆ ಪತ್ರ ಬರೆದಿದ್ದಾರೆ.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಜೂನ್ 22 ರವರೆಗೆ ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಶನಿವಾರ ಜೂನ್ 22 ರವರೆಗೆ ವಿಸ್ತರಿಸಿದೆ. ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದೆ.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಆಪ್ತ ಸಹಾಯಕ ಬಿಭವ್ ಕುಮಾರ್ ಹೈಕೋರ್ಟ್ ಗೆ ಅರ್ಜಿ
ಮೇ 13 ರಂದು ನಾನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದಾಗ ಬಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

ಯೂಟ್ಯೂಬರ್ ಧ್ರುವ್ ರಾಠೆ ವಿಡಿಯೋ ಬಳಿಕ ಅತ್ಯಾಚಾರ, ಜೀವ ಬೆದರಿಕೆಗಳು ಬರುತ್ತಿವೆ: ಸ್ವಾತಿ ಮಲಿವಾಲ್
ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ಚಾರಿತ್ರ್ಯ ವಧೆ ಅಭಿಯಾನದ ನಂತರ ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ. ಯೂಟ್ಯೂಬರ್ ಧ್ರುವ್ ರಾಠೆ ಅವರು ತಮ್ಮ ವಿರುದ್ಧ ಏಕಪಕ್ಷೀಯವಾದ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿದೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ.

ನನ್ನ ಮೇಲೆ ಹಲ್ಲೆ ನಡೆದಾಗ ಕೇಜ್ರಿವಾಲ್ ಮನೆಯಲ್ಲಿಯೇ ಇದ್ದರು: ಸ್ವಾತಿ ಮಲಿವಾಲ್
ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಘಟನೆಯನ್ನು ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ವಿವರಿಸಿದ್ದಾರೆ.

ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಫೋನ್ ಡೇಟಾ ಹಿಂಪಡೆಯಲು ಬಿಭವ್ ನನ್ನು ಮುಂಬೈಗೆ ಕರೆದೊಯ್ದ ಪೊಲೀಸರು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಅವರ ಫಾರ್ಮಾಟ್ ಮಾಡಲಾದ ಐಫೋನ್‌ನಿಂದ ಡೇಟಾ ಹಿಂಪಡೆಯಲು ಮುಂಬೈಗೆ ಕರೆದೊಯ್ಯಲಾಗುತ್ತಿದೆ.

ಅರವಿಂದ ಕೇಜ್ರಿವಾಲ್ ನಿವಾಸದಿಂದ ಸಿಸಿಟಿವಿ ಡಿವಿಆರ್ ವಶಪಡಿಸಿಕೊಂಡ ದೆಹಲಿ ಪೊಲೀಸರು!
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ ಇಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸವನ್ನು ತಲುಪಿದ್ದು, ಸಿಸಿಟಿವಿ ಡಿವಿಆರ್ ಅನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ನಿರ್ಭಯಾಗೆ ನ್ಯಾಯ ಕೇಳಿದ ಎಎಪಿ ನಾಯಕರು ಇಂದು ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ: ಸ್ವಾತಿ ಮಲಿವಾಲ್
ನಿರ್ಭಯಾ ಪ್ರಕರಣದಲ್ಲಿ ನ್ಯಾಯ ಕೇಳಿದ್ದ ತಮ್ಮ ಪಕ್ಷದ ಸಹೋದ್ಯೋಗಿಗಳು ಇದೀಗ ತಮ್ಮ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಎಎಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇದ್ದಿದ್ದರೆ ಬಹುಶಃ ನನಗೆ ಇಷ್ಟು ಕೆಟ್ಟ ಪರಿಸ್ಥಿತಿ ಎದುರಾಗುತ್ತಿರಲಿಲ್ಲ! ಎಂದಿದ್ದಾರೆ.

