ರಾಜ್ಯಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ-20 ಕ್ರಿಕೆಟ್ ಪಂದ್ಯ: ಮೆಟ್ರೋ ಸಂಚಾರ ವಿಸ್ತರಣೆ, ಪಾರ್ಕಿಂಗ್ ನಿರ್ಬಂಧ
ಭಾರತ-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ-20 ಪಂದ್ಯಾವಳಿಯ 5ನೇ ಪಂದ್ಯವು ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದೆ.