ರಾಜ್ಯಕನ್ನಡಪರ ಹೋರಾಟಗಾರರ ಬಗ್ಗೆ ಗೌರವ ಇದೆ, ಸಾರ್ವಜನಿಕ ಆಸ್ತಿ ಹಾನಿ ಮಾಡಿದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ: ಡಿ ಕೆ ಶಿವಕುಮಾರ್
ನಮಗೆ ಕನ್ನಡಪರ ಹೋರಾಟಗಾರರ ಬಗ್ಗೆ ಗೌರವ ಇದೆ. ಕನ್ನಡದ ಹೆಸರಿನಲ್ಲಿ ಹೋರಾಟಗಾರರು ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡಿದರೆ ನೋಡಿಕೊಂಡು ಸರ್ಕಾರ ಕಣ್ಣುಮುಚ್ಚಿಕೊಂಡು ಸುಮ್ಮನೆ ಇರಲು ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.