T20 World Cup

T20 World Cup ಟ್ರೋಫಿಯೊಂದಿಗೆ ತವರಿನತ್ತ ಹೊರಟ ಟೀಂ ಇಂಡಿಯಾ: ನಾಳೆ ದೆಹಲಿಗೆ ಆಗಮಿಸುವ ಸಾಧ್ಯತೆ
ಕೈಯಲ್ಲಿ ಟ್ರೋಫಿ ಹಿಡಿದು ವಿಮಾನದಲ್ಲಿ ನಿಂತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ನಾಯಕ ರೋಹಿತ್ ಶರ್ಮಾ, ಇದು ತವರಿಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಟೀಂ ಇಂಡಿಯಾ ಗುರುವಾರ ಬೆಳಗ್ಗೆ ದೆಹಲಿಗೆ ಬಂದಿಳಿಯುವ ನಿರೀಕ್ಷೆಯಿದೆ.

ಟಿ-20 ವಿಶ್ವಕಪ್: ನ್ಯೂಯಾರ್ಕ್ ನಲ್ಲಿ ಇಂದು ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ
ಅಮೆರಿಕದ ನ್ಯೂಯಾರ್ಕ್ ನಲ್ಲರುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ರಾತ್ರಿ ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಕ್ರಿಕೆಟ್ ಅಭಿಮಾನಿಗಳು ಪಂದ್ಯ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ.

T20 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಜಯ
ನ್ಯೂಯಾರ್ಕ್ ನ ವೆಸ್ಟ್‌ಬರಿಯಲ್ಲಿ ನಡೆದ T20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 8 ವಿಕೆಟ್ ಗಳ ಜಯ ಗಳಿಸಿದೆ.

T20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಜೈಸ್ವಾಲ್ ಆರಂಭಿಕನಾಗಿ ಆಡಬೇಕು: ಯುವರಾಜ್ ಸಿಂಗ್
ಮುಂದಿನ ತಿಂಗಳು ಆರಂಭವಾಗಲಿರುವ T20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯಬೇಕು. ರಿಷಭ್ ಪಂತ್ ವಿಕೆಟ್ ಕೀಪರ್ ಆಗಬೇಕು ಎಂದು ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಹೇಳಿದ್ದಾರೆ.

T20 ವಿಶ್ವಕಪ್ ನಂತರ ಭಾರತ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ರಾಜೀನಾಮೆ?
ಟೀಂ ಇಂಡಿಯಾದ ಮುಖ್ಯ ತರಬೇತುದಾರರಾಗಿರುವ ರಾಹುಲ್ ದ್ರಾವಿಡ್, ತಮ್ಮ ಅವಧಿ ವಿಸ್ತರಣೆಗೆ ಕೋರುವ ಸಾಧ್ಯತೆ ಕಡಿಮೆಯಿದ್ದು, ಟಿ 20 ವಿಶ್ವಕಪ್ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಈಗಾಗಲೇ ಬಿಸಿಸಿಐಗೆ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

T20 ವಿಶ್ವಕಪ್ ಟೂರ್ನಿ ಮೇಲೆ ಉಗ್ರರ ಕರಿನೆರಳು: ಭಯೋತ್ಪಾದಕ ದಾಳಿ ಬೆದರಿಕೆ, ಭದ್ರತೆ ಹೆಚ್ಚಳ!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಬಾರಿಯ ಟೂರ್ನಿಯನ್ನು ಯಶಸ್ವಿಯಾಗಿ ನಡೆಸಲು ಐಸಿಸಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ನಡುವಲ್ಲೇ ಅದ್ಧೂರಿ ಕ್ರೀಡಾಕೂಟದ ಮೇಲೆ ಉಗ್ರರ ಕರಿನೆರಳು ಬಿದ್ದಿದೆ.

ಕ್ರಿಕೆಟ್ ಅಖಾಡದಲ್ಲಿ ಅಮುಲ್‌ಗೆ ಟಕ್ಕರ್ ಕೊಡಲು ಮುಂದಾದ ನಂದಿನಿ: T20 ವಿಶ್ವಕಪ್ ಟೂರ್ನಿಯ ಪ್ರಾಯೋಜಕತ್ವಕ್ಕಾಗಿ ಪ್ರಯತ್ನ?
ಅಮುಲ್ ಮತ್ತು ನಂದಿನಿ ನಡುವಿನ ಹಾಲಿನ ಸಮರ ತೀವ್ರಗೊಳ್ಳುತ್ತಿದ್ದು, ಅದರ ಬಿಸಿ ಕ್ರಿಕೆಟ್ ಕ್ಷೇತ್ರಕ್ಕೂ ತಲುಪುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್), ನಂದಿನಿ ಬ್ರಾಂಡ್‌ನ ಹಾಲು ಮತ್ತು ಮೊಸರು ಮುಂತಾದ ಡೈರಿ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಲಭ್ಯವಿದೆ.

T20 World Cupನಲ್ಲಿ ಮಹತ್ವದ ಬದಲಾವಣೆ; Stop Clock ಕಡ್ಡಾಯ ಸೇರಿ ಹಲವು ಹೊಸ ನಿಯಮಗಳ ಜಾರಿಗೆ ತಂದ ICC
ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆ ಆರಂಭಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಸೀಮಿತ ಓವರ್ ಕ್ರಿಕೆಟ್ ಮಾದರಿಯಲ್ಲಿ ಮಹತ್ತರ ಬದಲಾವಣೆಗಳನ್ನು ಜಾರಿಗೆ ತಂದಿದೆ.

ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿಗೆ ಅವಕಾಶ ಇಲ್ಲ? ಈ ಯುವ ಕ್ರಿಕೆಟಿಗನನ್ನು ಕಣಕ್ಕಿಳಿಸಲು ಬಿಸಿಸಿಐ ಬಯಕೆ!
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದಾರೆ. ಅವರು 11 ಪಂದ್ಯಗಳಲ್ಲಿ 95.62 ಸರಾಸರಿ ಮತ್ತು 90.31 ಸ್ಟ್ರೈಕ್ ರೇಟ್‌ನಲ್ಲಿ 765 ರನ್ ಬಾರಿಸಿದ್ದರು. ಇನ್ನು ಪಂದ್ಯಾವಳಿಯ ಇತಿಹಾಸದಲ್ಲಿ ಒಂದು ಋತುವಿನಲ್ಲಿ 700ರ ಗಡಿ ದಾಟಿದ ಏಕೈಕ ಆಟಗಾರ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.

