T20 World Cup

ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ; ನಾಯಕ ರೋಹಿತ್ ಶರ್ಮಾಗೆ ಗಾಯ
ಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ಗೂ ಮುನ್ನವೇ ಟೀಂ ಇಂಡಿಯಾಗೆ ಹಿನ್ನಡೆ ಉಂಟಾಗಿದೆ. ಭಾರತ ತಂಡದ ನಾಯಕ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅವರ ಮುಂಗೈಗೆ ಮಂಗಳವಾರ ಬೆಳಗ್ಗೆ ಬಲವಾದ ಪೆಟ್ಟು ಬಿದ್ದಿದೆ.

ಟಿ20 ವಿಶ್ವಕಪ್: ಸೆಮಿಫೈನಲ್‌ಗೆ ಅಂಪೈರ್, ಅಧಿಕಾರಿಗಳ ಪ್ರಕಟಿಸಿದ ICC
ಹಾಲಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಸೆಮಿಫೈನಲ್ ಗೆ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಅಂಪೈರ್, ಅಧಿಕಾರಿಗಳ ನೇಮಕ ಮಾಜಿ ಪ್ರಕಟಣೆ ಹೊರಡಿಸಿದೆ.

ಟಿ20 ವಿಶ್ವಕಪ್: ನೆದರ್ಲೆಂಡ್ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ನಿವೃತ್ತಿ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಪಾಕಿಸ್ತಾನಕ್ಕೆ ಸೆಮೀಸ್ ಹಾದಿ ಸುಗಮ ಮಾಡಿಕೊಟ್ಟು ತನ್ನ ಅಭಿಯಾನ ಮುಕ್ತಾಯಗೊಳಿಸಿದ ನೆದರ್ಲ್ಯಾಂಡ್ಸ್ ತಂಡದ ಸ್ಟಾರ್ ಆಟಗಾರ ಸ್ಟೀಫನ್ ಮೈಬರ್ಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ಸೆಮಿಫೈನಲ್ ಪ್ರವೇಶ
ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧ 71 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾನುವಾರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ. ಈ ಮೂಲಕ 'ಎ' ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್...

ಟಿ-20 ವಿಶ್ವಕಪ್: ಜಿಂಬಾಬ್ವೆ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಘಟ್ಟದಲ್ಲಿನ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸೋಲು, ಭಾರತ ಸೆಮಿಫೈನಲ್ ಗೆ!
ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ ನ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು.

ಟಿ20 ವಿಶ್ವಕಪ್: ಲಂಕಾ ವಿರುದ್ಧ ಇಂಗ್ಲೆಂಡ್ ಗೆಲವು, ಸೆಮಿಫೈನಲ್ ಪ್ರವೇಶಿಸಿದ ಆಂಗ್ಲರು; ಆಸೀಸ್ ಮನೆಗೆ
ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ತಂಡ ನಾಲ್ಕು ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸುವ ಶನಿವಾರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ. ಇದರ ಪರಿಣಾಮ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಟಿ20 ಟೂರ್ನಿಯಿಂದ ಹೊರಬಿದ್ದಿದೆ.

ಟಿ-20 ವಿಶ್ವಕಪ್: ಮತ್ತೆ ಫಾರ್ಮ್ ಗೆ ಮರಳಿದ ಕೆ.ಎಲ್. ರಾಹುಲ್ ಕೊಂಡಾಡಿದ ಗೌತಮ್ ಗಂಭೀರ್!
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ನಲ್ಲಿ ಬಾಂಗ್ಲಾದೇಶ ವಿರುದ್ಧ ಭರ್ಜರಿ ಅರ್ಧ ಶತಕ ಗಳಿಸಿ ಟೀಂ ಇಂಡಿಯಾ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೆ.ಎಲ್. ರಾಹುಲ್ ಅವರನ್ನು ಮಾಜಿ ಆಟಗಾರ ಗೌತಮ್ ಗಂಭೀರ್ ಕೊಂಡಾಡಿದ್ದಾರೆ. ರಾಹುಲ್ ಯಾವಾಗಲೂ ಫಾರ್ಮ್ ನಲ್ಲಿರುವುದಾಗಿ ಹೇಳಿದ್ದಾರೆ.

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
ವಿರಾಟ್ ಕೊಹ್ಲಿ ಜೊತೆ ಅಗ್ರಸ್ಥಾನದಲ್ಲಿ ಬ್ಯಾಟಿಂಗ್ ಮಾಡುವುದು 'ನಿರ್ದಿಷ್ಟ ಆಯ್ಕೆ'. ಆದರೆ ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಕೆಎಲ್ ರಾಹುಲ್ ತಮ್ಮ ಆರಂಭಿಕ ಪಾಲುದಾರರಾಗಿ ಉಳಿಯಲಿದ್ದಾರೆ.

