Tamil Nadu

ಕಾವೇರಿ ವಿವಾದ: ನೀರು ಬಿಟ್ಟರೂ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು; ಇಲ್ಲಿದೆ ಕಾರಣ...
CWMA ಮತ್ತು CWRC ನಿರ್ದೇಶನಗಳನ್ನು ನೀಡಿದ್ದರೂ ಕರ್ನಾಟಕವು ಕಡ್ಡಾಯವಾಗಿ ತಮಿಳುನಾಡಿಗೆ ಬಿಡಬೇಕಾದ ನೀರು ಬಿಡಲು ವಿಫಲವಾಗಿದೆ.

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ
ಬೆಂಗಳೂರು ನಗರದ ಕುಡಿಯುವ ನೀರಿಗಾಗಿ 18 ಟಿಎಂಸಿ ನೀರು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆ ಪ್ರಮಾಣದ ನೀರನ್ನು ನೀಡುವುದಕ್ಕೆ ನಮಗೆ ಯಾವುದೇ ವಿರೋಧವಿಲ್ಲ. ಆ ನೀರನ್ನು ಮೇಕೆದಾಟು ಯೋಜನೆ ನಿರ್ಮಿಸುವ ಬದಲು ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಿಂದಲೇ ಪಡೆದುಕೊಳ್ಳಬಹುದು.

ಕಾವೇರಿ ವಿವಾದ: ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಮಿಳುನಾಡು ನಿರ್ಧಾರ..!
ಕರ್ನಾಟಕವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನಗಳಿದ್ದರೂ ಪದೇ ಪದೇ ತಮಿಳುನಾಡಿಗೆ ನೀರು ಬಿಡಲು ನಿರಾಕರಿಸುತ್ತಿದೆ.

ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ: ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಪ್ರದರ್ಶನ ಸ್ಥಗಿತ!
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ CWRC ನಿರ್ದೇಶನ ನೀಡಿರುವುದನ್ನು ವಿರೋಧಿಸಿ ಕನ್ನಡ ಪರ ಕಾರ್ಯಕರ್ತರು ಇಂದು ಮಂಡ್ಯದಲ್ಲಿ ಪ್ರತಿಭಟನೆ ತೀವ್ರಗೊಳಿಸಿದರು.

ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ
CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ; Video
ಈ ನಡುವೆ, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕರ್ನಾಟಕವು 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ನೀಡಿರುವ ನಿರ್ದೇಶನವನ್ನು ಖಂಡಿಸಿ ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆಗಳು ನಡೆದವು.

ತಮಿಳುನಾಡಿಗೆ ನೀರು ಬಿಡಲು CWRC ಆದೇಶ: ಮೇಲ್ಮನವಿ ಸಲ್ಲಿಸಲು ಶೀಘ್ರದಲ್ಲೇ ತೀರ್ಮಾನ; ಸಚಿವ ರಾಮಲಿಂಗಾ ರೆಡ್ಡಿ; Video
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, 15 ದಿನಗಳಲ್ಲಿ ಸುಮಾರು 4 ಟಿಎಂಸಿ (ಸಾವಿರ ಮಿಲಿಯನ್ ಘನ ಅಡಿ) ನೀರನ್ನು ಬಿಡುಗಡೆ ಮಾಡುವಂತೆ CWRC ಸೂಚನೆ ನೀಡಿದೆ. ಆದರೆ ಕರ್ನಾಟಕ ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತೆ ಅಡ್ಡಗಾಲು; ಪ್ರಧಾನಿ ಮೋದಿ ಮಧ್ಯ ಪ್ರವೇಶಿಸುವಂತೆ ಕೋರಿ ವಿಜಯ್ ಪತ್ರ
ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಹೇಳಿದ್ದೆ ತಡ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್, ಮೇಕೆದಾಟು ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೋರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಮೇಕೆದಾಟು ಯೋಜನೆಗೆ ಸಮ್ಮತಿ ಅಗತ್ಯವೇ ಇಲ್ಲ: ಕರ್ನಾಟಕದ ಹಕ್ಕು ಪುನರುಚ್ಚರಿಸಿದ ಕೇಂದ್ರ ಸರ್ಕಾರ; ಡಿಕೆಶಿ ಧನ್ಯವಾದ
ಇಂದು ರಾಜ್ಯಸಭೆಯಲ್ಲಿ ಜಲಶಕ್ತಿ ಖಾತೆ ರಾಜ್ಯ ಸಚಿವರು ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಇದೇ ವಿಷಯವನ್ನು ಪುನರುಚ್ಚರಿಸಿದ್ದಾರೆ. ಕರ್ನಾಟಕದ ಪರವಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

