tamilnadu

ಕಾಂಚೀಪುರಂ: ಚರ್ಚ್ ಬಳಿ ಯುವಕನ ರುಂಡ, ಕಿ.ಮೀ ದೂರದ ಕ್ವಾರಿಯಲ್ಲಿ ಮುಂಡ; ಕೊಲೆ ಹಿಂದೆ ಪ್ರತೀಕಾರದ ಹೊಗೆ!
ಪರಿಚಯಸ್ಥರ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಚರ್ಚ್ ನಿಂದ ಹೊರಬರುತ್ತಿದ್ದ ಅಭಿಷೇಕ್ ಎಂಬಾತನನ್ನು ಕಳೆದ ವರ್ಷ ವೆಟ್ರಿವೇಲ್ ತಂಡ ಹತ್ಯೆ ಮಾಡಿತ್ತು. ಇದೀಗ ಅದೇ ಸ್ಥಳದಲ್ಲಿ ವೆಟ್ರಿವೇಲ್ ರುಂಡ ಪತ್ತೆಯಾಗಿದೆ.

ನೀಟ್ ಪರೀಕ್ಷೆ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ: ತಮಿಳುನಾಡಿನಲ್ಲಿ ನೀಟ್ ಗೆ ಇದು ಎರಡನೇ ಬಲಿ
ವಿದ್ಯಾರ್ಥಿನಿ ಕನ್ನಿಮೋಳಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 562 ಅಂಕಗಳನ್ನು ಪಡೆದಿದ್ದಳು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂದು ಆಕೆ ಪೋಷಕರಲ್ಲಿ ಹೇಳಿಕೊಂಡಿದ್ದಳು.

ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡಲು ರಾಜ್ಯಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಸೂಚನೆ
ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ ಎನ್ನಲಾಗಿದೆ.

ಮೇಕೆದಾಟು: ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ಸರ್ಕಾರ ಅಡ್ಡಗಾಲು ಹಾಕಿದ್ದು, ವಿಸ್ತೃತ ಯೋಜನಾ ವರದಿ (ಡಿಪಿಆರ್) ತಿರಸ್ಕರಿಸಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

ಕೇಂದ್ರ-ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ?: ಮೇಕೆದಾಟು ವಿಚಾರವಾಗಿ ಕುಮಾರಸ್ವಾಮಿ ಸರಣಿ ಟ್ವೀಟ್
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

ತಮಿಳುನಾಡು: ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ವಾಸವಿದ್ದ ಒಂಬತ್ತು ಇರಾನಿ ಪ್ರಜೆಗಳ ಬಂಧನ
ತಮಿಳುನಾಡಿನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ವಾಸವಿದ್ದ ಒಂಬತ್ತು ಇರಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

'ಪ್ರಸ್ತುತ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ': ಕರ್ನಾಟಕಕ್ಕೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ
ಹಾಲಿ ಪರಿಸ್ಥಿತಿಯಲ್ಲಿ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ತಮಿಳುನಾಡು ತೀರ್ಮಾನದ ಬಗ್ಗೆ ಮಾತು ಬೇಡ; ನಾವು ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ: ಸಿಎಂ ಯಡಿಯೂರಪ್ಪ
ಬೆಂಗಳೂರಿಗೆ ಮಂಗಳವಾರ ಆಗಮಿಸಿದ್ದ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.

ರಾಜಕೀಯದ ನಿರ್ಧಾರವನ್ನು ಮರುಪರಿಶೀಲಿಸುತ್ತೇನೆ: ರಜನಿಕಾಂತ್
ಕಳೆದ ವರ್ಷ ರಾಜಕೀಯದಿಂದ ದೂರವಿರುವುದಾಗಿ ಘೋಷಿಸುವ ಮೂಲಕ ಅನೇಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್, ಸೋಮವಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ಹೇಳಿದ್ದಾರೆ.

