ರಾಜ್ಯಒತ್ತಡ, ವಿರೋಧಕ್ಕೆ ಮಣಿದ ಸರ್ಕಾರ: ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಪ್ರಮಾಣದಲ್ಲಿ ಇಳಿಕೆ!
ಮಳೆ ಅಭಾವದಿಂದಾಗಿ ರಾಜ್ಯ ಸಂಕಷ್ಟದಲ್ಲಿದ್ದರೂ, ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಪಕ್ಷ ಹಾಗೂ ರೈತರಿಂದ ತೀವ್ರ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ, ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟವನ್ನು ಇಳಿಕೆ ಮಾಡಿದೆ.