ರಾಜ್ಯಮೈಸೂರು ದಸರಾ ಆರಂಭ: ಪ್ರವಾಸಿ ವಾಹನಗಳಿಗೆ ಇಲ್ಲ ತೆರಿಗೆ ವಿನಾಯಿತಿ
ದಸರಾ ಹಬ್ಬ ನಿನ್ನೆ ಭಾನುವಾರ ಆರಂಭವಾಗಿದ್ದು, ಮೈಸೂರು ನಗರಕ್ಕೆ ಆಗಮಿಸುವ ಪ್ರವಾಸಿಗರ ವಾಹನಗಳಿಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿಲ್ಲ. ರಾಜ್ಯದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸಕ್ಕೆ ಈಗಾಗಲೇ ಹೆಚ್ಚಿನ ಹೊರೆಯಾಗಿರುವುದರಿಂದ ತೆರಿಗೆ ವಿನಾಯಿತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆಯ ಮೂಲಗಳು ತಿಳಿಸಿವೆ.