Tejashwi Yadav

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ತೇಜಸ್ವಿ ಯಾದವ್‌ಗೆ ಜಾಮೀನು ಮಂಜೂರು
ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಮತ್ತು ಪುತ್ರಿ ಆರ್‌ಜೆಡಿ ಸಂಸದೆ ಮಿಸಾ ಭಾರ್ತಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

ಮಾನನಷ್ಟ ಮೊಕದ್ದಮೆ: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಅಹಮದಾಬಾದ್ ಕೋರ್ಟ್ ಸಮನ್ಸ್
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೆಲ ಗೊಂದಲಗಳಿಂದ ಮೊದಲ ಸಮನ್ಸ್ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದ ನಂತರ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯ ಶುಕ್ರವಾರ ಎರಡನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಗುಜರಾತಿಗಳು 'ವಂಚಕರು' ಹೇಳಿಕೆ: ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಗೆ ಕೋರ್ಟ್ ಸಮನ್ಸ್
"ಗುಜರಾತಿಗಳು ಮಾತ್ರ ವಂಚಕರು" ಎಂದು ಟೀಕಿಸಿದ್ದಕ್ಕಾಗಿ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಈ ಸಂಬಂಧ ಅಹಮದಾಬಾದ್ ಮೆಟ್ರೋಪಾಲಿಟನ್...

ಪಾಟ್ನಾದಲ್ಲಿ ಜೂನ್ 23ಕ್ಕೆ ವಿಪಕ್ಷಗಳ ಸಭೆ: ರಾಹುಲ್, ಮಮತಾ, ಕೇಜ್ರಿವಾಲ್, ಸ್ಟಾಲಿನ್ ಭಾಗಿ- ತೇಜಸ್ವಿ ಯಾದವ್
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರು ಇಡುವ ನಿಟ್ಟಿನಲ್ಲಿ ವಿಪಕ್ಷಗಳ ಮೈತ್ರಿಕೂಟ ರಚನೆ ಕಸರತ್ತು ಬಿರುಸಿನಿಂದ ಸಾಗಿದ್ದು, ಪಾಟ್ನಾದಲ್ಲಿ ಜೂನ್ 23 ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 'ವಿಪಕ್ಷಗಳ ಸಭೆ'' ಆಯೋಜಿಸಿದ್ದಾರೆ.

ಗುಜರಾತಿಗಳನ್ನು ನಿಂದಿಸಿದರೆ ಜೋಕೆ; ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು 'ಸದ್ಯದ ಪರಿಸ್ಥಿತಿಯಲ್ಲಿ ಗುಜರಾತಿಗಳು ಮಾತ್ರ ಘಾತುಕರಾಗಲು ಸಾಧ್ಯ' ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ಇಲ್ಲಿನ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ.

ಲಾಲು ಪ್ರಸಾದ್ ಮಗನಾಗಿರದಿದ್ದರೆ ತೇಜಸ್ವಿಯೇ ನಿರುದ್ಯೋಗಿ: 10 ಲಕ್ಷ ಉದ್ಯೋಗದ ಭರವಸೆ ಕುರಿತು ಪ್ರಶಾಂತ್ ಕಿಶೋರ್ ವ್ಯಂಗ್ಯ
ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 10 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ತೇಜಸ್ವಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಮಗನಾಗಿರದಿದ್ದರೆ ಅವರಿಗೇ ಕೆಲಸ ಸಿಗುತ್ತಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ದಂಪತಿಗೆ ಹೆಣ್ಣು ಮಗು ಜನನ
ಬಿಹಾರ ರಾಜ್ಯದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ತಮ್ಮ ಮೊದಲ ಮಗುವನ್ನು ಸೋಮವಾರ ಸ್ವಾಗತಿಸಿದ್ದಾರೆ.

ಉದ್ಯೋಗಕ್ಕಾಗಿ ಭೂಮಿ ಹಗರಣ: 8 ಗಂಟೆಗಳ ಕಾಲ ಸಿಬಿಐನಿಂದ ತೇಜಸ್ವಿ ಯಾದವ್ ವಿಚಾರಣೆ
ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸಿಬಿಐ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಶನಿವಾರ ತನ್ನ ಪ್ರಧಾನ ಕಚೇರಿಯಲ್ಲಿ ಎಂಟು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉದ್ಯೋಗಕ್ಕಾಗಿ ಭೂ ಹಗರಣ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಿಬಿಐ ಮುಂದೆ ವಿಚಾರಣೆಗೆ ಹಾಜರು
ಈ ಹಿಂದೆ ಮೂರು ವಿಚಾರಣೆ ದಿನಾಂಕಗಳಿಂದ ದೂರವುಳಿದಿದ್ದ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಶನಿವಾರ ಇಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

