Tejasvi Surya

ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಎಂಡಿ ನೇಮಕ ಪ್ರಕ್ರಿಯೆ ವಿಳಂಬ; ತೇಜಸ್ವಿ ಸೂರ್ಯ ಕಿಡಿ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳ ನಡುವೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶನಿವಾರ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಪೂರ್ಣಾವಧಿಯ ವ್ಯವಸ್ಥಾಪಕ ನಿರ್ದೇಶಕರ ನೇಮಕ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಮ ವರ್ಗದವರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಮಧ್ಯಮ ವರ್ಗದವರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದಾರೆ.

INDIA ಮೈತ್ರಿಕೂಟ ಹಾವು, ಮುಂಗುಸಿಗಳು ಒಟ್ಟಿಗೆ ಸೇರಿದಂತೆ: ತೇಜಸ್ವಿ ಸೂರ್ಯ ಬಣ್ಣನೆ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ವಿರೋಧ ಪಕ್ಷದ ಮೈತ್ರಿಯನ್ನು "ಹಾವು ಮತ್ತು ಮುಂಗುಸಿಗಳು' ಒಟ್ಟಿಗೆ ಸೇರಿದಂತೆ ಎಂದು ಬಣ್ಣಿಸಿದ್ದಾರೆ.

ವಿಪಕ್ಷಗಳ ಒಕ್ಕೂಟ ದೋಸ್ತಿಯನ್ನು ರಾಜ್ಯದ ಹಿತಕ್ಕಾಗಿ ಬಳಸಿ: ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಸಲಹೆ
ಕಾಂಗ್ರೆಸ್ ಹಾಗೂ ಡಿಎಂಕೆ ವಿಪಕ್ಷಗಳ ಒಕ್ಕೂಟದ ಭಾಗವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ದೋಸ್ತಿಯನ್ನು ರಾಜ್ಯದ ಹಿತಕ್ಕಾಗಿ ಬಳಸಿಕೊಳ್ಳಬೇಕೆಂದು ಸಂಸದ ತೇಜಸ್ವಿ ಸೂರ್ಯ ಅವರು ಆಗ್ರಹಿಸಿದ್ದಾರೆ.

3ನೇ ಬಾರಿಗೆ ಪ್ರಧಾನಿ ಮೋದಿ: ಯುವ ಮತದಾರರನ್ನು ಸೆಳೆಯಲು ಬಿಜೆಪಿ ಜಾಗೃತಿ ಅಭಿಯಾನ, ತೇಜಸ್ವಿ ಸೂರ್ಯ ಸಾರಥಿ
ತನ್ನ ರಾಷ್ಟ್ರೀಯ ಪ್ರಚಾರದ ಭಾಗವಾಗಿ ಯುವ ಮತದಾರರನ್ನು ಸೆಳೆಯುವ ಪ್ರಬಲ ಪ್ರಯತ್ನದಲ್ಲಿ, ರಾಜ್ಯ ಬಿಜೆಪಿ ಶುಕ್ರವಾರ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ಪ್ರಕಟಿಸಿದೆ.

ಅಮಿತ್ ಮಾಳವಿಯಾ ವಿರುದ್ಧದ ಎಫ್‌ಐಆರ್ ರಾಜಕೀಯ ಪ್ರೇರಿತ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಅಕ್ಕಿ ಖರೀದಿ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ ರಾಜ್ಯ ಸರ್ಕಾರ ಜನರನ್ನು ತಪ್ಪುದಾರಿಗೆಳೆಯುತ್ತಿದೆ: ತೇಜಸ್ವಿ ಸೂರ್ಯ
ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡುವುದನ್ನು ನಿಲ್ಲಿಸಿದೆ ಎಂದು ಉದ್ದೇಶಪೂರ್ವಕವಾಗಿ ನಿಯಮಗಳನ್ನು ತಿರುಚಿ ಸುಳ್ಳು ಸುದ್ದಿ ಹಬ್ಬಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ತಪ್ಪುಹಾದಿಗೆಳೆಯುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ 'ಅರ್ಧ ಸುಳ್ಳಿನ' ಸರ್ಕಾರ ನಡೆಸುತ್ತಿದೆ: ಎಫ್‌ಸಿಐ ವಿವಾದದ ಬಗ್ಗೆ ತೇಜಸ್ವಿ ಸೂರ್ಯ
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ನೀಡುವ ಯೋಜನೆಯಾದ 'ಅನ್ನ ಭಾಗ್ಯ' ಜಾರಿಗೆ ಕೇಂದ್ರವು ಅಡ್ಡಿಪಡಿಸುತ್ತಿದೆ ಎಂಬ ಕರ್ನಾಟಕ ಸರ್ಕಾರದ ಆರೋಪವನ್ನು ತಳ್ಳಿಹಾಕಿದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕಾಂಗ್ರೆಸ್ ನೇತೃತ್ವದ ಸರ್ಕಾರ ಅರ್ಧ ಸತ್ಯಗಳ ಮೇಲೆ ನಡೆಸುತ್ತಿರುವ ಸರ್ಕಾರ ಎಂದು ಕರೆದರು.

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ ಪ್ರಾರಂಭ: ಸಂಸದ ತೇಜಸ್ವಿ ಸೂರ್ಯ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 'ಸುಳ್ಳು ಪ್ರಕರಣ'ಗಳನ್ನು ದಾಖಲಿಸಿರುವ ಪಕ್ಷದ ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ರಾಜ್ಯ ಬಿಜೆಪಿ ಘಟಕವು ಶನಿವಾರ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದೆ.

