Telangana Assembly elections

ತೆಲಂಗಾಣ ವಿಧಾನಸಭೆ ಚುನಾವಣೆ: ಮತದಾನದ ವೇಳೆ ಇಬ್ಬರು ಮತದಾರರು ಸಾವು
ದೇಶ

ತೆಲಂಗಾಣ ವಿಧಾನಸಭೆ ಚುನಾವಣೆ: ಮತದಾನದ ವೇಳೆ ಇಬ್ಬರು ಮತದಾರರು ಸಾವು

ತೆಲಂಗಾಣದ ಆದಿಲಾಬಾದ್ ಪಟ್ಟಣದಲ್ಲಿ ಗುರುವಾರ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಇಬ್ಬರು ಮತದಾರರು ಸಾವಿಗೀಡಾಗಿದ್ದಾರೆ. ಮತಗಟ್ಟೆಯಲ್ಲೇ ಹಿರಿಯ ನಾಗರಿಕರಿಬ್ಬರೂ ಅಸ್ವಸ್ಥರಾಗಿದ್ದಾರೆ. 

ತೆಲಂಗಾಣ ಚುನಾವಣಾ ಪ್ರಚಾರದಲ್ಲಿ 'ಡೀಪ್‌ಫೇಕ್' ತಂತ್ರಜ್ಞಾನ; ಕಾಂಗ್ರೆಸ್ ವಿರುದ್ಧ ಬಿಆರ್‌ಎಸ್ ದೂರು
ದೇಶ

ತೆಲಂಗಾಣ ಚುನಾವಣಾ ಪ್ರಚಾರದಲ್ಲಿ 'ಡೀಪ್‌ಫೇಕ್' ತಂತ್ರಜ್ಞಾನ; ಕಾಂಗ್ರೆಸ್ ವಿರುದ್ಧ ಬಿಆರ್‌ಎಸ್ ದೂರು

ತೆಲಂಗಾಣದಲ್ಲಿ ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಕ್ಷದ  ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ 'ಡೀಪ್‌ಫೇಕ್' ತಂತ್ರಜ್ಞಾನವನ್ನು ಬಳಸಿ ನಕಲಿ ಸುದ್ದಿಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿ ಬಿಆರ್‌ಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ: ರೇವಂತ್ ರೆಡ್ಡಿ
ದೇಶ

ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ: ರೇವಂತ್ ರೆಡ್ಡಿ

ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ಭಾರಿ ಭದ್ರತೆಯ ನಡುವೆ ರಾಜ್ಯದ ವಿವಿಧ ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ತೆಲಂಗಾಣ ಚುನಾವಣೆ 2023: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ
ದೇಶ

ತೆಲಂಗಾಣ ಚುನಾವಣೆ 2023: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಗುರುವಾರ ಕರೆ ನೀಡಿದ್ದಾರೆ. 

ತೆಲಂಗಾಣ ಚುನಾವಣೆ: ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ದೂರು ದಾಖಲು!
ದೇಶ

ತೆಲಂಗಾಣ ಚುನಾವಣೆ: ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ದೂರು ದಾಖಲು!

ಮತದಾನದ ದಿನದಂದು 'ಮತ ಕೇಳುವ' ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ಗುರುವಾರ ದೂರು ದಾಖಲಿಸಿದ್ದಾರೆ.

ತೆಲಂಗಾಣ: ಕೆಸಿಆರ್‌ಗೆ 4 ಸಾವಿರ ರೂ. ವೃದ್ಧಾಪ್ಯ ವೇತನ, ಜೈಲಿನಲ್ಲಿ 2BHK ಮನೆ ನೀಡಲಾಗುವುದು- ರೇವಂತ್ ರೆಡ್ಡಿ
ದೇಶ

ತೆಲಂಗಾಣ: ಕೆಸಿಆರ್‌ಗೆ 4 ಸಾವಿರ ರೂ. ವೃದ್ಧಾಪ್ಯ ವೇತನ, ಜೈಲಿನಲ್ಲಿ 2BHK ಮನೆ ನೀಡಲಾಗುವುದು- ರೇವಂತ್ ರೆಡ್ಡಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ 4,000 ರೂ. ವೃದ್ಧಾಪ್ಯ ವೇತನ ನೀಡಲಾಗುವುದು ಮತ್ತು ಚೆರ್ಲಪಲ್ಲಿ ಕೇಂದ್ರ ಕಾರಾಗೃಹದಲ್ಲಿ ಅವರಿಗೆ 2 BHK ಮನೆ ನಿರ್ಮಿಸಿಕೊಡುವುದಾಗಿ ಟಿಪಿಸಿಸಿ ಮುಖ್ಯಸ್ಥ ಎ ರೇವಂತ್ ರೆಡ್ಡಿ ಗುರುವಾರ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಗ್ಯಾರಂಟಿಗಳನ್ನು ಜಾರಿಗೊಳಿಸಿಲ್ಲ, 'ಸುಳ್ಳು ಭರವಸೆ' ಬಗ್ಗೆ ಎಚ್ಚರದಿಂದಿರಿ: ಜೆಪಿ ನಡ್ಡಾ
ದೇಶ

ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಗ್ಯಾರಂಟಿಗಳನ್ನು ಜಾರಿಗೊಳಿಸಿಲ್ಲ, 'ಸುಳ್ಳು ಭರವಸೆ' ಬಗ್ಗೆ ಎಚ್ಚರದಿಂದಿರಿ: ಜೆಪಿ ನಡ್ಡಾ

ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಆರ್‌ಎಸ್ ಎರಡೂ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ ಎಂದು ಗುರುವಾರ ದೂರಿದ್ದಾರೆ.

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಆರು ಗ್ಯಾರಂಟಿಗಳ ಭರವಸೆ
ದೇಶ

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಆರು ಗ್ಯಾರಂಟಿಗಳ ಭರವಸೆ

ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಬಿಡುಗಡೆಗೊಳಿಸಿದರು.

ತೆಲಂಗಾಣ ವಿಧಾನಸಭೆ ಚುನಾವಣೆ: ಪ್ರಚಾರದ ವೇಳೆ ಬಿಆರ್‌ಎಸ್ ಸಂಸದ ಕೋತಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ
ದೇಶ

ತೆಲಂಗಾಣ ವಿಧಾನಸಭೆ ಚುನಾವಣೆ: ಪ್ರಚಾರದ ವೇಳೆ ಬಿಆರ್‌ಎಸ್ ಸಂಸದ ಕೋತಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಚಾರ ನಡೆಸುತ್ತಿದ್ದ ವೇಳೆ ತೆಲಂಗಾಣ ಸಂಸದ ಕೋತಾ ಪ್ರಭಾಕರ್ ರೆಡ್ಡಿ ಅವರಿಗೆ ಸೋಮವಾರ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ. ಅವರು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ದುಬ್ಬಾಕ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.