ದೇಶತೆಲಂಗಾಣ ಸಂಸ್ಥಾಪನಾ ದಿನ: ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್'ಗೆ ಆಹ್ವಾನ ನೀಡದ ಸರ್ಕಾರ!
ಪ್ರತ್ಯೇಕ ರಾಜ್ಯವಾಗಿ ಉದಯಿಸಿದ ತೆಲಂಗಾಣ 10ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಆಹ್ವಾನವನ್ನೇ ನೀಡಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.