ದೇಶತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರಂಟಿ ಬಗ್ಗೆ ಜಾಹಿರಾತು: ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್
ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿನ ಪತ್ರಿಕೆಗಳಲ್ಲಿ ಗ್ಯಾರಂಟಿ ಕುರಿತು ಜಾಹಿರಾತು ನೀಡುವುದನ್ನು ನಿಲ್ಲಿಸುವಂತೆ ಚುನಾವಣಾ ಆಯೋಗ ಸೋಮವಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆಯ ಅಡಿಯಲ್ಲಿ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯದ ಕಾರಣದಿಂದ ವಿವರಣೆಯನ್ನು ಕೇಳಿದೆ.