Telangana

ತೆಲಂಗಾಣ: ಕಾಂಗ್ರೆಸ್ಗೆ ಅಭಿನಂದನೆ ಸಲ್ಲಿಸಿದ ಬಿಆರ್ಎಸ್ ನಾಯಕ ಕೆಟಿಆರ್; ಪಕ್ಷದ ಸೋಲಿನ ಬಗ್ಗೆ ಹೇಳಿದ್ದೇನು?
ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯ (ಬಿಆರ್ಎಸ್) ನಾಯಕ ಕೆಟಿ ರಾಮರಾವ್ ಅವರು ನಿರಾಸೆ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿದ್ದಾರೆ.

ಕರ್ನಾಟಕದ ಬಳಿಕ ತೆಲಂಗಾಣ: ಕಾಂಗ್ರೆಸ್ ಗೆ ಮತ್ತೊಂದು ಗೆಲುವು ತಂದ ಚುನಾವಣಾ ಚಾಣಕ್ಯ, ಸುನಿಲ್ ಬಿಟ್ಟು ಕೈ ಸುಟ್ಟುಕೊಂಡರೇ ಕೆಸಿಆರ್!
ಕಳೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡಿ ಅಭೂತಪೂರ್ವ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ಇದೀಗ ತೆಲಂಗಾಣದಲ್ಲೂ ಮ್ಯಾಜಿಕ್ ಮಾಡಿದ್ದಾರೆ.

ಛತ್ತೀಸ್ಗಢದಲ್ಲಿ ತಲೆಕೆಳಗಾದ ಸಮೀಕ್ಷಾ ವರದಿ: ಕಾಂಗ್ರೆಸ್ ಗೆ ಭಾರಿ ಹಿನ್ನಡೆ, ಸ್ಪಷ್ಟ ಬಹುಮತದತ್ತ ಬಿಜೆಪಿ
ತೀವ್ರ ಕುತೂಹಲ ಕೆರಳಿಸಿರುವ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತೀವ್ರ ಪೈಪೋಟಿಯಿಂದ ಕೂಡಿದ್ದ ಛತ್ತೀಸ್ ಘಡದಲ್ಲಿ ಇದೀಗ ಬಿಜೆಪಿ ಕಮಾಲ್ ಮಾಡುತ್ತಿದ್ದ ತನ್ನ ಅಂತರವನ್ನು ಭಾರಿ ಸಂಖ್ಯೆಯಲ್ಲಿ ಹೆಚ್ಚಿಸಿಕೊಂಡಿದೆ.

'ಕೈ' ಹಿಡಿಯದ ಹಿಂದಿ ಭಾಷಿಕರು, ಗ್ಯಾರಂಟಿಗಳಿಗೆ ಮನಸೋಲದ ಮತದಾರರು, ತೆಲಂಗಾಣಕ್ಕೆ ತೃಪ್ತಿ!
ಹಿಂದಿ ಭಾಷಿಕರ ಹೃದಯ ಭಾಗದಲ್ಲಿ ಕಾಂಗ್ರೆಸ್ ಈ ಬಾರಿ ಸ್ಪಷ್ಟವಾಗಿ ಜನಾದೇಶ ಕಳೆದುಕೊಂಡಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ತನ್ನ ನಾಲ್ಕನೇ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದರೊಂದಿಗೆ ಕಾಂಗ್ರೆಸ್ ಮಧ್ಯ ಪ್ರದೇಶದಲ್ಲಿ ಜನಮಾನಸದಿಂದ ದೂರವಾಗಿದೆ ಎನ್ನಬಹುದು.

ಕರ್ನಾಟಕದಿಂದ ಹೋಗಿರುವ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ: ಕುಮಾರಸ್ವಾಮಿ ಟಾಂಗ್!
ತೆಲಂಗಾಣ ರಾಜ್ಯ ನಾಯಕರು ಮಾಡಿದ ಪ್ರಚಾರದಿಂದ ಗೆದ್ದಿಲ್ಲ, ಬದಲಾಗಿ ಇಲ್ಲಿಂದ (ಕರ್ನಾಟಕ) ರವಾನೆಯಾದ ಹಣದಿಂದ ಕಾಂಗ್ರೆಸ್ ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

10 ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸತ್ತಿದ್ದರು: ತೆಲಂಗಾಣ ಗೆಲುವಿನ ಕುರಿತು ಡಿಕೆ ಶಿವಕುಮಾರ್ ಹೇಳಿಕೆ
10 ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಂಬಿ ತೆಲಂಗಾಣದಲ್ಲಿ ಗೆಲುವು ನೀಡಿದ್ಜದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಮ್ಮ ಒಬ್ಬ ಶಾಸಕರನ್ನು ಸಹ ಮುಟ್ಟಲು ಆಗುವುದಿಲ್ಲ: ತೆಲಂಗಾಣ ಚುನಾವಣಾ ಫಲಿತಾಂಶ ಕುರಿತು ಡಿಕೆ ಶಿವಕುಮಾರ್
ತೆಲಂಗಾಣದಲ್ಲಿ ಇಂದು ನಡೆಯುತ್ತಿರುವ ಮತ ಎಣಿಕೆ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಬಹುತೇಕ ಸ್ಪಷ್ಟವಾದಂತೆ ತೋರುತ್ತಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರ ಕುದುರೆ ವ್ಯಾಪಾರದ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ.

ಛತ್ತೀಸ್ ಗಢ ಚುನಾವಣಾ ಫಲಿತಾಂಶ: 'ಆಘಾತ, ಆಶ್ಚರ್ಯ' ಎಂದ ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿ
ತೀವ್ರ ಕುತೂಹಲ ಕೆರಳಿಸಿರುವ ಛತ್ತೀಸ್ ಗಢ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಯತ್ತ ಸಾಗಿದ್ದು, ಈ ಫಲಿತಾಂಶದ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ರೇಣುಕಾ ಚೌದರಿ 'ಆಘಾತಕಾರಿ ಆಶ್ಚರ್ಯ' ತಂದಿದೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣಾ ಫಲಿತಾಂಶ: 3 ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್ ಕಮಾಲ್
2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮತ್ತು 1 ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆಯಲ್ಲಿದೆ.

