Telangana

ರಾಜ್ಯದಲ್ಲಿ ಬದಲಾವಣೆ ತರುವಂತೆ ತೆಲಂಗಾಣ ಮತದಾರರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮನವಿ
ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಂಗಳವಾರ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಬದಲಾವಣೆಯನ್ನು ತರಲು ರಾಜ್ಯದ ಮತದಾರರಿಗೆ ಮನವಿ ಮಾಡಿದರು.

ರಾಹುಲ್ ಗಾಂಧಿಗೆ ಬಿಆರ್ಎಸ್ ನಾಯಕಿ ಸವಾಲು; ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಎಂದ ಕೆ ಕವಿತಾ
ಕಾಂಗ್ರೆಸ್ ಆಡಳಿತವಿರುವ ಯಾವುದೇ ರಾಜ್ಯಗಳಲ್ಲಿ ತೆಲಂಗಾಣ ಸರ್ಕಾರ ನೀಡಿದ್ದಕ್ಕಿಂತ ಒಂದೇ ಒಂದು ಹೆಚ್ಚು ಉದ್ಯೋಗ ನೀಡಲಾಗಿದೆ ಎಂಬುದನ್ನು ಎಐಸಿಸಿ ಮಾಜಿ ಅಧ್ಯಕ್ಷರು ಸಾಬೀತುಪಡಿಸಿದರೆ ರಾಜಕೀಯ ತ್ಯಜಿಸುತ್ತೇನೆ ಎಂದು ಬಿಆರ್ಎಸ್ ಎಂಎಲ್ಸಿ ಕೆ ಕವಿತಾ ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದ ತೆರಿಗೆದಾರರ ಹಣದಲ್ಲಿ ತೆಲಂಗಾಣ ಪತ್ರಿಕೆಗಳಿಗೆ ಜಾಹಿರಾತು: ಕಾಂಗ್ರೆಸ್ ಢೋಂಗಿತನ ಕಳಚುತ್ತಿದೆ- ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದ ತೆರಿಗೆದಾರರ ಹಣವನ್ನು ತೆಲಂಗಾಣ ಪತ್ರಿಕೆಗಳಿಗೆ ಜಾಹಿರಾತು ನೀಡುವ ಮೂಲಕ ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.

ತಿರುಪತಿ ದೇಗುಲಕ್ಕೆ ಪ್ರಧಾನಿ ಭೇಟಿ, 140 ಕೋಟಿ ಭಾರತೀಯರ ಶ್ರೇಯಸ್ಸಿಗೆ ಪ್ರಾರ್ಥಿಸಿದೆ ಎಂದ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ್ದು, ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದಿದ್ದಾರೆ. ೌ

ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಕೆಟಿಆರ್ ಹೇಳಿಕೆ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಸರ್ಕಾರ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂಬ ಭಾರತ ರಾಷ್ಟ್ರ ಸಮಿತಿಯ (ಬಿಆರ್ಎಸ್) ಕಾರ್ಯಾಧ್ಯಕ್ಷ ಕೆಟಿಆರ್ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಿರಸ್ಕರಿಸಿದ್ದಾರೆ. ನಾವು 5 ಭರವಸೆಗಳನ್ನು ಜಾರಿಗೆ ತರಲು ನಿರ್ಧರಿಸಿದ್ದೆವು ಮತ್ತು ಮೊದಲು ಸಂಪುಟ ಸಭೆಯಲ್ಲೇ ಆದೇಶಗಳನ್ನು ಹೊರಡಿಸಿದ್ದೇವೆ ಎಂದು ಹೇಳಿದರು.

ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರದಲ್ಲಿ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ: ರಾಹುಲ್ ಗಾಂಧಿ
ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ಅವರು ಅಧಿಕಾರದಲ್ಲಿ ಇರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಪ್ರಧಾನಿ ಕೆಸಿಆರ್ ಬೆಂಬಲದ ಲಾಭ ಪಡೆಯುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

ತೆಲಂಗಾಣದಲ್ಲಿ 'ಮುಸ್ಲಿಂ ಮೀಸಲಾತಿ ಅಸಂವಿಧಾನಿಕ': ಸಿಎಂ ಯೋಗಿ ಆದಿತ್ಯನಾಥ್
ತೆಲಂಗಾಣದಲ್ಲಿ ಮುಸ್ಲಿಂರಿಗೆ ನೀಡಿರುವ ಮೀಸಲಾತಿ ಡಾ. ಬಿ. ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಗುಡುಗಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆ: ಬಿಆರ್ಎಸ್ ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆ
ತೆಲಂಗಾಣ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಒಂದು ವಾರ ಬಾಕಿ ಇರುವಂತೆಯೇ ಬಿಆರ್ ಎಸ್ ಹಾಲಿ ಶಾಸಕ ಕೈ ಕೊಟ್ಟಿದ್ದು, ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ತೆಲಂಗಾಣ ಚುನಾವಣೆ: ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ; ಬಿಆರ್ಎಸ್ ಆರೋಪಗಳಿಗೆ ಕೆಜೆ ಜಾರ್ಜ್ ತಿರುಗೇಟು
ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆ ಬಗ್ಗೆ ಬಿಆರ್ಎಸ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆಜೆ ಜಾರ್ಜ್, ತಮ್ಮ ರಾಜ್ಯದಲ್ಲಿ ಐದರಿಂದ ಹತ್ತು ದಿನಗಳನ್ನು ಹೊರತುಪಡಿಸಿ, ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಗುರುವಾರ ಹೇಳಿದ್ದಾರೆ.

