ರಾಜ್ಯಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುತ್ತದೆ ಹತಾಶರಾಗದಿರಿ, ದೂರದರ್ಶನದಲ್ಲಿ ಏಪ್ರಿಲ್ 29 ರಿಂದ ಪುನರ್ಮನನ ಪಾಠ: ಸುರೇಶ್ ಕುಮಾರ್
ಲಾಕ್ಡೌನ್ ಮುಗಿಯುವ ಮೇ 3ರ ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆ ಬರೆಯಲು ನಿರಂತರ ಅಧ್ಯಯನಶೀಲರಾಗಿರಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.