terrorist

ಐಸಿಸ್ ಉಗ್ರ ಸಂಘಟನೆ ಜೊತೆ ನಂಟು: ರಾಜ್ಯದಲ್ಲಿ ಶಂಕಿತ ಉಗ್ರರ ಬಂಧನ
ರಾಜ್ಯ

ಐಸಿಸ್ ಉಗ್ರ ಸಂಘಟನೆ ಜೊತೆ ನಂಟು: ರಾಜ್ಯದಲ್ಲಿ ಶಂಕಿತ ಉಗ್ರರ ಬಂಧನ

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಡಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡವು ಇಬ್ಬರನ್ನು ಬಂಧಿಸಿದ್ದು ಮತ್ತೊಬ್ಬನಿಗಾಗಿ ಶೋಧ ನಡೆಸಿದೆ.

ಕಾಬೂಲ್ ನಲ್ಲಿ ಸ್ಫೋಟ: ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವು
ವಿದೇಶ

ಕಾಬೂಲ್ ನಲ್ಲಿ ಸ್ಫೋಟ: ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವು

ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿದ್ದು ತಾಲಿಬಾನ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಾಬೂಲ್ ನಲ್ಲಿರುವ ದೇಶದ ರಾಯಭಾರ ಕಚೇರಿಯ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ರಷ್ಯಾದ ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ.

ಭಾರತದ ಮೇಲೆ ದಾಳಿ ಮಾಡಲು ಪಾಕಿಸ್ತಾನದಿಂದ ಹಣ ಪಡೆದಿದ್ದ ಬಂಧಿತ ಭಯೋತ್ಪಾದಕ ಹೃದಯಾಘಾತದಿಂದ ಸಾವು!
ದೇಶ

ಭಾರತದ ಮೇಲೆ ದಾಳಿ ಮಾಡಲು ಪಾಕಿಸ್ತಾನದಿಂದ ಹಣ ಪಡೆದಿದ್ದ ಬಂಧಿತ ಭಯೋತ್ಪಾದಕ ಹೃದಯಾಘಾತದಿಂದ ಸಾವು!

ಎರಡು ವಾರಗಳ ಹಿಂದೆ ಒಳನುಸುಳುವಿಕೆಗೆ ಯತ್ನಿಸುತ್ತಿದ್ದ ವೇಳೆ ಬಂಧಿತ ಪಾಕಿಸ್ತಾನಿ ಭಯೋತ್ಪಾದಕ ಹೃದಯಾಘಾತದಿಂದ ಶನಿವಾರ (ಸೆಪ್ಟೆಂಬರ್ 3) ಸಾವನ್ನಪ್ಪಿದ್ದಾನೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಸೇನಾ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದ.

ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರಿಂದ ಗುಂಡಿನ ದಾಳಿ, ಓರ್ವ ಸಾವು
ದೇಶ

ಕಾಶ್ಮೀರಿ ಪಂಡಿತ ಸಹೋದರರ ಮೇಲೆ ಉಗ್ರರಿಂದ ಗುಂಡಿನ ದಾಳಿ, ಓರ್ವ ಸಾವು

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಸಾವನ್ನಪ್ಪಿದ್ದು, ಆತನ ಸಹೋದರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಫಿದಾಯಿನ್ ಸಾವು
ದೇಶ

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಫಿದಾಯಿನ್ ಸಾವು

ಜಮ್ಮು- ಕಾಶ್ಮೀರದ ಗಡಿ ಜಿಲ್ಲೆ ರಾಜೌರಿಯಲ್ಲಿರುವ ಸೇನಾ ಶಿಬಿರದ ಮೇಲೆ ಗುರುವಾರ ಬೆಳಗಿನ ಜಾವ ನಡೆದ ಆತ್ಮಹತ್ಯಾ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿ ಇಬ್ಬರು ಫಿದಾಯಿನ್ ಉಗ್ರ ಆತ್ಮಹತ್ಯಾ ದಾಳಿಕೋರರು ಮೃತಪಟ್ಟಿದ್ದಾರೆ.

ಶ್ರೀನಗರ: ಭಯೋತ್ಪಾದಕರ ಗುಂಡಿನ ದಾಳಿ; ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ, ಇಬ್ಬರಿಗೆ ಗಾಯ!
ದೇಶ

ಶ್ರೀನಗರ: ಭಯೋತ್ಪಾದಕರ ಗುಂಡಿನ ದಾಳಿ; ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ, ಇಬ್ಬರಿಗೆ ಗಾಯ!

ಶ್ರೀನಗರದ ಡೌನ್ ಟೌನ್ ಪ್ರದೇಶದಲ್ಲಿನ ಪೊಲೀಸ್ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರ ದಾಳಿ ವೇಳೆ ಓರ್ವ ಪೊಲೀಸ್ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಇಬ್ಬರು ಸ್ಥಳೀಯ ಉಗ್ರರು ಪೊಲೀಸರ ಮುಂದೆ ಶರಣು
ದೇಶ

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಇಬ್ಬರು ಸ್ಥಳೀಯ ಉಗ್ರರು ಪೊಲೀಸರ ಮುಂದೆ ಶರಣು

ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಡಿಗಮ್ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿಯಿಂದ ಆರಂಭವಾದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಪೊಲೀಸರ ಮುಂದೆ ಶರಣಾಗಿದ್ದಾರೆ. 

ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶ
ದೇಶ

ಜಮ್ಮು-ಕಾಶ್ಮೀರ: ಭಯೋತ್ಪಾದಕನ ಬಂಧನ, ಶಸ್ತ್ರಾಸ್ತ್ರಗಳ ವಶ

ಜಮ್ಮು-ಕಾಶ್ಮೀರದ ದೋಡಾ ಪೊಲೀಸರು ಭದ್ರತಾ ಪಡೆಗಳೊಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ  ಕೋಟಿ ದೋಡಾ ನಿವಾಸಿ ಫರೀದ್ ಅಹ್ಮದ್ ಎಂಬ ಭಯೋತ್ಪಾದಕನನ್ನು ಸೋಮವಾರ ನಸುಕಿನ ಜಾವ ಬಂಧಿಸಿದ್ದಾರೆ. ಆತನ ಬಳಿಯಿಂದ ಒಂದು ಚೈನೀಸ್ ಪಿಸ್ತೂಲ್, ಎರಡು ಬಂದೂಕುಗಳು, 14 ಕಾಟ್ರೀಜ್ ಗಳು ಮತ್ತು ಒಂದು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. 

ಕುಪ್ವಾರ ಎನ್ ಕೌಂಟರ್: ಇಬ್ಬರು ಉಗ್ರರು ಹತ, ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ
ದೇಶ

ಕುಪ್ವಾರ ಎನ್ ಕೌಂಟರ್: ಇಬ್ಬರು ಉಗ್ರರು ಹತ, ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಭಾನುವಾರ ಹತರಾಗಿದ್ದಾರೆ, ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.