terrorist

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನಾಪಡೆ ಎನ್'ಕೌಂಟರ್: ಇಬ್ಬರು ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಎಂದು ಬುಧವಾರ ತಿಳಿದುಬಂದಿದೆ.

ಉಗ್ರರ ದಾಳಿ ಭೀತಿ: ಪಂಡಿತರ ಬಳಿಕ ಕಾಶ್ಮೀರ ತೊರೆದು ತವರು ರಾಜ್ಯಗಳತ್ತ ಹೆಜ್ಜೆ ಹಾಕಿದ ಜನತೆ!
ಉಗ್ರರ ಸತತ ದಾಳಿಗಳಿಂದ ಬೆದರಿದ ಕಾಶ್ಮೀರಿ ಪಂಡಿತರು ಕಣಿವೆ ರಾಜ್ಯ ಕಾಶ್ಮೀರ ತೊರೆದು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದರು. ಆದರೆ ಇದೀಗ ಇತರೆ ರಾಜ್ಯಗಳಿಂದ ಬಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಯೂಸಿದ್ದವರೂ ಕೂಡ ಕಾಶ್ಮೀರ ತೊರೆಯುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಸೇನಾಧಿಕಾರಿ, ಯೋಧ ಹುತಾತ್ಮ
4 ದಿನಗಳ ಹಿಂದಷ್ಟೇ ಉಗ್ರರ ದಾಳಿಗೆ 5 ಯೋಧರು ಹುತಾತ್ಮರಾದ ಬೆನ್ನಲ್ಲೇ ಗುರುವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ ಹಾಗೂ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

ಕಾಶ್ಮೀರ ನಾಗರಿಕ ಹತ್ಯೆ: ಕಣಿವೆ ರಾಜ್ಯ ತೊರೆಯದಂತೆ ವಲಸಿಗ ಪಂಡಿತ ನೌಕರರಿಗೆ ಸರ್ಕಾರ ಮನವಿ
ಕಳೆದ ವಾರ ಉಗ್ರರಿಂದ ಮೂವರು ಅಲ್ಪಸಂಖ್ಯಾತ ಸಮುದಾಯದವರು ಮತ್ತು ವಲಸಿಗ ಬೀದಿ ಬದಿ ವ್ಯಾಪಾರಿ ಹತ್ಯೆ ನಂತರ ಕಣಿವೆ ರಾಜ್ಯದಲ್ಲಿ ಆತಂಕ ಮನೆ ಮಾಡಿದ್ದು ವಲಸಿಗ ಕಾಶ್ಮೀರಿ ಪಂಡಿತ ಉದ್ಯೋಗಿಗಳನ್ನು ಕಣಿವೆ ಬಿಟ್ಟು ಹೋಗದಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ನಕಲಿ ಐಡಿ ಇಟ್ಟುಕೊಂಡು ಭಾರತೀಯ ಪ್ರಜೆ ಎಂದು ಓಡಾಟ: ದೆಹಲಿಯಲ್ಲಿ ಪಾಕ್ ಮೂಲದ ಉಗ್ರನ ಬಂಧನ
ಪಾಕಿಸ್ತಾನ ಮೂಲದ ಶಂಕಿತ ಉಗ್ರನೊಬ್ಬನನ್ನು ಮಂಗಳವಾರ ದೆಹಲಿಯಲ್ಲಿ ಬಂಧಿಸಲಾಗಿದೆ. ದೆಹಲಿ ವಿಶೇಷ ತನಿಖಾ ತಂಡವು ಬಂಧಿತ ಉಗ್ರನನ್ನುತೀವ್ರ ವಿಚಾರಣೆಗೊಳಪಡಿಸಿದೆ ಎಂದು ತಿಳಿದು ಬಂದಿದೆ.

ಶೋಪಿಯಾನ್ ಎನ್ಕೌಂಟರ್: ಸೇನಾಪಡೆ ಗುಂಡೇಟಿಗೆ ಓರ್ವ ಉಗ್ರ ಹತ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್'ನ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು
ಆಡಳಿತ ಮತ್ತು ವಿಪಕ್ಷ ನಾಯಕರ ಮಧ್ಯೆ ವಾಗ್ದಾಳಿ ನಿಲ್ಲುತ್ತಲೇ ಇಲ್ಲ, ಮಂಗಳೂರಿನಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಕಿ ಆರಿಸುವ ಸೋಗಿನಲ್ಲಿ ಪಾಕಿಸ್ತಾನ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ವಿಶ್ವಸಂಸ್ಥೆಯಲ್ಲಿ ಭಾರತ ಕಟುಟೀಕೆ
ತನ್ನ ನೆಲದಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಪಾಕಿಸ್ತಾನ ಬೆಂಕಿ ಆರಿಸುವ ಸೋಗಲಾಡಿತನದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿರುವ ಇಮ್ರಾನ್ ಖಾನ್ ಗೆ ಭಾರತ ತಿರುಗೇಟು ನೀಡಿದೆ.

ಭಯೋತ್ಪಾದಕರಿಗೆ ಪಾಕಿಸ್ತಾನ ಆಶ್ರಯ, ಬೆಂಬಲ; ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು: ಪ್ರಧಾನಿ ಮೋದಿ ಜೊತೆ ಕಮಲಾ ಹ್ಯಾರಿಸ್ ಉಲ್ಲೇಖ
ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರವನ್ನು ನೇರವಾಗಿ, ಸ್ವಯಂಪ್ರೇರಿತವಾಗಿ ಪ್ರಸ್ತಾಪಿಸಿದ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಭಯೋತ್ಪಾದನೆಗೆ ಪಾಕಿಸ್ತಾನ ನೀಡುತ್ತಿರುವ ಬೆಂಬಲ ಬಗ್ಗೆ ಸೂಕ್ಷ್ಮವಾಗಿ ಪರಿಸ್ಥಿತಿ ಮತ್ತು ಆಗುಹೋಗುಗಳನ್ನು ಗಮನಿಸಬೇಕು ಎಂದು ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಆದ ಮಾತುಕತೆ ವೇಳೆ ಹೇಳಿದ್ದಾರೆ.

