terrorists

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುತಾಣ ಪತ್ತೆ, ಇಬ್ಬರು ಶಂಕಿತ ಉಗ್ರರ ಬಂಧನ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳ ವಿರುದ್ಧದ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಸೇನೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

ಅನಂತನಾಗ್ ಎನ್ಕೌಂಟರ್: ಉಗ್ರರ ಗುಂಡಿಗೆ ಇಬ್ಬರು ಸೇನಾಧಿಕಾರಿ, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಸೇನಾಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

ಮಣಿಪುರ: ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ ನಾಲ್ವರು ಭಯೋತ್ಪಾದಕರ ಬಂಧನ
ಪ್ರತ್ಯೇಕ ಕಾರ್ಯಾಚರಣೆಯಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರು ಕಾರ್ಮಿಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ: ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ, ಸಿಎಂ ಶ್ಲಾಘನೆ
ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರವಾಗಿ ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಮ್ಮು-ಕಾಶ್ಮೀರ: ಪೂಂಚ್ ಬಳಿ ಗಡಿ ನುಸುಳಲು ಯತ್ನ, ಮೂವರು ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ 8 ಉಗ್ರರ ಮನೆಗಳ ಮೇಲೆ ಪೊಲೀಸ್ ವಿಶೇಷ ತನಿಖಾ ಘಟಕ ದಾಳಿ!
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಿಶೇಷ ತನಿಖಾ ಘಟಕ ಇಂದು ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಎಂಟು ಪಾಕಿಸ್ತಾನ ಮೂಲದ ಭಯೋತ್ಪಾದಕರ ಮನೆಗಳ ಮೇಲೆ ದಾಳಿ ನಡೆಸಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭಯೋತ್ಪಾದಕರಿಂದ ಸ್ಫೋಟ; ಐವರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕಂಡಿ ಅರಣ್ಯದಲ್ಲಿ ಶುಕ್ರವಾರ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ವಿಶೇಷ ಪಡೆಗಳಿಗೆ ಸೇರಿದ ಇಬ್ಬರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

