terrorists

ಪಾಕಿಸ್ತಾನ ತನ್ನ ಸಾರ್ವಭೌಮತ್ವ ಕಾಪಾಡಲು ಬದ್ಧ: ರಾಜನಾಥ್ ಸಿಂಗ್ ಹೇಳಿಕೆ ಖಂಡಿಸಿದ ಪಾಕ್
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಯನ್ನು ಖಂಡಿಸಿದ ಪಾಕಿಸ್ತಾನ, ತನ್ನ ಸಾರ್ವಭೌಮತ್ವವನ್ನು ಕಾಪಾಡಲು ಬದ್ಧ ಮತ್ತು ಸಾಮರ್ಥ್ಯದಲ್ಲಿ ತಾನು ದೃಢವಾಗಿ ನಿಂತಿರುವುದಾಗಿ ಪಾಕಿಸ್ತಾನ ಶನಿವಾರ ಹೇಳಿದೆ.

ಉಗ್ರರು ಭಾರತದಲ್ಲಿ ದಾಳಿ ಮಾಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಿದರೆ, ಪಾಕ್ ಗೆ ನುಗ್ಗಿ ಹೊಡೆಯುತ್ತೇವೆ: ರಾಜನಾಥ್ ಸಿಂಗ್
"ನೆರೆಯ ದೇಶದ ಭಯೋತ್ಪಾದಕರು ಭಾರತದಲ್ಲಿ ಶಾಂತಿ ಕದಡಲು ಪ್ರಯತ್ನಿಸಿದರೆ ಅಥವಾ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಿದರೆ ನಾವು ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ".

ಕಳೆದ ವರ್ಷ ಜಮ್ಮು-ಕಾಶ್ಮೀರದಲ್ಲಿ 72 ಉಗ್ರರ ಹತ್ಯೆ
2023 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 72 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿರುವುದಾಗಿ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅವರಲ್ಲಿ 50 ಮಂದಿ ವಿದೇಶಿ ಮೂಲದವರಾಗಿದ್ದಾರೆ ಎನ್ನಲಾಗಿದೆ.

ಗುಹೆಗಳಲ್ಲಿ ಉಗ್ರರ ಅಡಗುದಾಣ ಪತ್ತೆ: ಭಾರತೀಯ ಯೋಧರಿಗೆ ಹೊಸ ಸವಾಲು; ಗುಹೆಗಳ ನಾಶಕ್ಕೆ ಸೇನೆಗೆ ಸೂಚನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ನೈಸರ್ಗಿಕ ಗುಹೆಗಳಲ್ಲಿ ಉಗ್ರರ ಅಡಗುದಾಣ ಪತ್ತೆಯಾದ ಹಿನ್ನಲೆಯಲ್ಲಿ ಗುಹೆಗಳನ್ನು ನಾಶಪಡಿಸಲು ಸೇನೆಗೆ ಸೂಚನೆ ನೀಡಲಾಗಿದೆ.

ಶ್ರೀನಗರ-ಬಾರಾಮುಲ್ಲಾ ರಸ್ತೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಇರಿಸಿದ ಭಯೋತ್ಪಾದಕರು!
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಐಇಡಿ ಇರಿಸಿರುವುದು ಪತ್ತೆಯಾಗಿದೆ.

ಜಮ್ಮು-ಕಾಶ್ಮೀರ: ಮಸೀದಿಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಸಾವು!
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಮುಂಬೈಗೆ ಭಯೋತ್ಪಾದಕರು ಪ್ರವೇಶಿಸಿದ್ದಾರೆ..! ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
26/11/2008ರಂದು ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯ 15ನೇ ವಾರ್ಷಿಕೋತ್ಸವವನ್ನು ಮುಂಬೈ ಸೇರಿದಂತೆ ದೇಶಾದ್ಯಂತ ನಿನ್ನೆ ಕರಾಳ ದಿನವನ್ನು ನೆನಪಿಸಿಕೊಳ್ಳಲಾಯಿತು. ಇನ್ನು ಅಂದು ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕ್ಯಾಪ್ಟನ್ ಎಂವಿ ಪ್ರಾಂಜಲ್ ಹುತಾತ್ಮ: ನಂದನವನದಲ್ಲಿ ನೀರವ ಮೌನ; ಇಂದು ಸಂಜೆ ಬೆಂಗಳೂರಿಗೆ ಪಾರ್ಥೀವ ಶರೀರ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಅವರು ಹುತಾತ್ಮರಾಗಿದ್ದು, ಈ ನಡುವಲ್ಲೇ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ನಂದನವನದಲ್ಲಿರುವ ಅವರ ನಿವಾಸದಲ್ಲಿ ನೀರವ ಮೌನ ಆವರಿಸಿದೆ.

ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಉಗ್ರರ ಹತ್ಯೆ, ಕಾರ್ಯಾಚರಣೆ ಮುಂದುವರಿಕೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಶುಕ್ರವಾರ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ಲಷ್ಕರ್-ಎ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

