Test cricket

26ನೇ ವಯಸ್ಸಿಗೆ ಟೆಸ್ಟ್ ಕ್ರಿಕೆಟ್‌ಗೆ ವನಿಂದು ಹಸರಂಗ ನಿವೃತ್ತಿ ಘೋಷಣೆ!
ಶ್ರೀಲಂಕಾ ತಂಡದ ಆಲ್‌ರೌಂಡರ್ ವನಿಂದು ಹಸರಂಗಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಕೇವಲ 26 ನೇ ವಯಸ್ಸಿನಲ್ಲಿ ಅವರು ಟೆಸ್ಟ್ ಕ್ರಿಕೆಟ್ ತ್ಯಜಿಸಲು ನಿರ್ಧರಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್ ಪೂರೈಸಿದ ಮೊಹಮ್ಮದ್ ಸಿರಾಜ್!
ಟೀಂ ಇಂಡಿಯಾದ ವೇಗಿ ಟೆಸ್ಟ್ ಕ್ರಿಕೆಟ್ ನಲ್ಲಿ 50 ವಿಕೆಟ್ ಪೂರೈಸಿದ್ದಾರೆ. ಓವೆಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟದ ವೇಳೆ ಸಿರಾಜ್ ಈ ಸಾಧನೆ ಮಾಡಿದರು.

ಟೆಸ್ಟ್ ಕ್ರಿಕೆಟ್ನಲ್ಲಿ 200ಕ್ಕೂ ಹೆಚ್ಚು ವಿಕೆಟ್ ಪಡೆದ 11 ಭಾರತೀಯ ಬೌಲರ್‌ಗಳು ಇವರೇ!
ಟೆಸ್ಟ್ ಕ್ರಿಕೆಟ್ನಲ್ಲಿ 300ಕ್ಕೂ ಹೆಚ್ಚು ಕ್ರಿಕೆಟಿಗರು ಭಾರತವನ್ನು ಪ್ರತಿನಿಧಿಸಿದ್ದಾರೆ, ಆದರೆ ಅವರಲ್ಲಿ 11 ಮಂದಿ ಮಾತ್ರ 200ಕ್ಕೂ ಹೆಚ್ಚು ವಿಕೆಟ್ ಪಡೆದು ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಜಗತ್ತಿನಾದ್ಯಂತ ಭೀತಿ ಹುಟ್ಟಿಸಿರುವ ಓಮಿಕ್ರಾನ್ ಕೊರೋನಾ ರೂಪಾಂತರ ಭೀತಿ ನಡುವೆಯೇ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭಿಸಿರುವ ಭಾರತ ಇಂದು ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂದ್ದಾರೆ.

ಹರ್ಭಜನ್ ಸಿಂಗ್ ದಾಖಲೆ ಮುರಿದ ಆರ್ ಅಶ್ವಿನ್, ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ 3ನೇ ಯಶಸ್ವಿ ಬೌಲರ್
ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸೋಮವಾರ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಮುರಿಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿ ವಿದಾಯ
ಟೆಸ್ಟ್ ಕ್ರಿಕೆಟ್ ಗೆ ಇಂಗ್ಲೆಂಡ್ ಆಲ್ ರೌಂಡರ್ ಮೋಯಿನ್ ಅಲಿ ನಿವೃತ್ತಿ ಘೋಷಿಸಿದ್ದಾರೆ. ಆದಾಗ್ಯೂ ಅವರು ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ರಾಷ್ಟ್ರೀಯ ತಂಡದಲ್ಲಿ ಆಡುವುದನ್ನು ಮುಂದುವರಿಸುತ್ತಾರೆ. ಇದನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಖಚಿತಪಡಿಸಿದೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮುರಿದ ವೇಗಿ ಜೇಮ್ಸ್ ಆಂಡರ್ಸನ್
ಇಂಗ್ಲೆಂಡ್ ವೇಗಿ ಆಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದು, ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ಪ್ರವಾಸದಲ್ಲಿರುವ ಕೊಹ್ಲಿ ಪಡೆಯ ಇಬ್ಬರು ಆಟಗಾರರಿಗೆ ಕೊರೋನಾ ಸೋಂಕು!
ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಮುಕ್ತಾಯದ ಬಳಿಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆಡಲು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ನಾಡಿನಲ್ಲಿ ಉಳಿದುಕೊಂಡಿದ್ದು, ಇದೀಗ ತಂಡದ ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಟೀವ್ ಸ್ಮಿತ್ ಮತ್ತೆ ಅಗ್ರ ಸ್ಥಾನಕ್ಕೆ; 4ನೇ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ
ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದು, ಆಸಿಸ್ ದೈತ್ಯ ಸ್ಟೀವ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

