Thawar Chand Gehlot

ದೇವಸ್ಥಾನ ನಿಧಿ ಬಳಕೆಗೆ ಅವಕಾಶ ನೀಡುವ ಹಿಂದೂ ಧಾರ್ಮಿಕ ದತ್ತಿ ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್
ಮಹತ್ವದ ಬೆಳವಣಿಗೆಯಲ್ಲಿ ದೇವಸ್ಥಾನ ನಿಧಿ ಬಳಕೆ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಬಜೆಟ್ ಅಧಿವೇಶನ: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ, ಗ್ಯಾರಂಟಿ ಯೋಜನೆಗೆ ಬಹುಪರಾಕ್!
ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೂಟ್ ಅವರು ಉಭಯ ಸದನಗಳನ್ನು ಉದ್ದೇಶಿಸಿ ಜಂಟಿ ಸದನ ಭಾಷಣ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಹುಪರಾಕ್ ಹೇಳಿದ್ದಾರೆ.

ರಾಷ್ಟ್ರ ನಿರ್ಮಾಣಕ್ಕೆ ಯುವಕರು ಕೊಡುಗೆ ನೀಡಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ದೇಶಕ್ಕೆ ಯುವಕರ ಕೊಡುಗೆಯ ಮಹತ್ವವನ್ನು ಒತ್ತಿ ಹೇಳಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, 'ಯುವಕರು ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ ಪ್ರಮುಖ ಅಂಶವಾಗಿದ್ದಾರೆ. ರಾಷ್ಟ್ರದ ಪರಿವರ್ತನೆಯಲ್ಲಿ ಯುವಕರ ಪಾತ್ರವು ಪ್ರಮುಖವಾಗಿದೆ' ಎಂದು ಹೇಳಿದರು.

ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್ ದಾಸ್ ಹೆಸರಿಗೆ ರಾಜ್ಯಪಾಲರ ಅನುಮೋದನೆ!
ದಲಿತ ಸಚಿವರ ತೀವ್ರ ವಿರೋಧದ ನಡುವೆಯೂ ವಿಧಾನಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಸರ್ಕಾರ ಶಿಫಾರಸು ಮಾಡಿದ್ದ ಮೂವರ ಹೆಸರುಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅನುಮೋದನೆ ನೀಡಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ವಿಮಾನ ಹತ್ತದಂತೆ ತಡೆದ ಏರ್‌ಏಷ್ಯಾ ಇಂಡಿಯಾ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಮಾನ ಹತ್ತಲು ಅನುಮತಿ ನಿರಾಕರಿಸಿದ ನಂತರ ಗುರುವಾರ ಮಧ್ಯಾಹ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಹೈದರಾಬಾದ್‌ಗೆ ಏರ್‌ಏಷ್ಯಾ ಇಂಡಿಯಾ ವಿಮಾನ ಟೇಕ್ ಆಪ್ ಆಗಿದ್ದು, ಇದೊಂದು ಪ್ರೋಟೊಕಾಲ್ ಉಲ್ಲಂಘನೆ ಎಂದು ಮೂಲಗಳು ತಿಳಿಸಿವೆ.

ವಿಧಾನಮಂಡಲ ಅಧಿವೇಶನ: ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ಕರ್ನಾಟಕ ದಾಪುಗಾಲು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ಭಾಷಣ
ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದರು.

ವಿಶ್ವದಾಖಲೆಯ ಯೋಗಥಾನ್-2023ಕ್ಕೆ ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಚಾಲನೆ
ರಾಷ್ಟ್ರೀಯ ಯುವ ದಿನದ ಅಂಗವಾಗಿ ರಾಜ್ಯದಾದ್ಯಂತ ಯೋಗಥಾನ್ ಆಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹೃದಯಾಘಾತದಿಂದ ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಸಾವು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ!
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನಗೊಳಿಸುವ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ.

