ರಾಜ್ಯಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಅಂತಿಮವಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.