ರಾಜ್ಯತೃತೀಯ ಭಾಷೆ ಮೇಲಿನ ಪ್ರೇಮವನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಉಕ್ಕಿ ಹರಿಸಿ, ನಿಮ್ಮ ಅಧಿಕಪ್ರಸಂಗವನ್ನ ಕರ್ನಾಟಕ ಒಪ್ಪಲ್ಲ: ರಾಜ್ಯಪಾಲರ ವಿರುದ್ಧ ಕರವೇ ಆಕ್ರೋಶ
ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ರಾಜಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ.