ರಾಜಕೀಯಟಿಕೆಟ್ ಕೇಳಿದರೆ ಎಷ್ಟು ಕೋಟಿ ಹಣವಿದೆ ಎಂದು ನಾಯಕರು ಕೇಳುತ್ತಾರೆ?; 'ಗಂಟು' ನೀಡುತ್ತಿರುವ ಭಟ್ಟಂಗಿಗಳಿಗೆ ಮಾತ್ರ ಬೆಲೆ: ತೀ.ನಾ. ಶ್ರೀನಿವಾಸ್
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದರೆ ನಿಮ್ಮ ಬಳಿ ಎಷ್ಟು ಕೋಟಿ ಹಣವಿದೆ ಎಂದು ಪಕ್ಷದ ನಾಯಕರು ಕೇಳುತ್ತಾರೆ. ಇದರಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಹೇಳಿದರು.