ರಾಜ್ಯಬೆಳಗಾವಿ: ಅರೆಬೆತ್ತಲೆಗೊಳಿಸಿ ಹಲ್ಲೆ ಕುರಿತ ಮಹಿಳೆಯ ಆರೋಪಕ್ಕೆ ಸಾಕ್ಷ್ಯಾಧಾರಗಳಿಲ್ಲ; ಪೊಲೀಸರು
ಬೈಲಹೊಂಗಲ ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಹಿಳೆಯನ್ನು ಎಳೆದಾಡಿ ಬಟ್ಟೆ ಹರಿದು, ಥಳಿಸಿದ ಆರೋಪ ಕುರಿತು ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಹೀಗಾಗಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಅವರು ಬುಧವಾರ ಹೇಳಿದರು.