TMC, BJP workers

'ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ': ಕಾಂಗ್ರೆಸ್ ಗೆ ಮುಜುಗರ ತಂದ ಅಧೀರ್ ರಂಜನ್ ಹೇಳಿಕೆ!
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಮತ್ತು ಬಹರಂಪುರದ ಕಾಂಗ್ರೆಸ್ ಅಭ್ಯರ್ಥಿ ಅಧೀರ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಹೇಳಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು ಅಧೀರ್ ಅವರ ಈ ಹೇಳಿಕೆ ಇದೀಗ ಕಾಂಗ್ರೆಸ್ ಗೆ ಮುಜುಗರ ತಂದಿಟ್ಟಿದೆ.

ಜೈ ಶ್ರೀರಾಮ್ ಎಂದ ಮೂವರ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ, ಪ್ರತಿಭಟನೆ
ರಾಮನವಮಿಯ ದಿನ ಕಾರಿಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಮೂವರು ಹಿಂದೂಗಳ ವಿರುದ್ಧ ಅನ್ಯಕೋಮಿನ ಕೆಲವರು ಹಲ್ಲೆ ನಡೆಸಿರುವ ಘಟನೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗುರುವಾರ ಸರ್ಕಾರದ ವಿರದ್ಧ ಪ್ರತಿಭಟನೆ ನಡೆಸಿತು.

ಲೋಕಸಭೆ ಚುನಾವಣೆಗೆ ಟಿಎಂಸಿ ಪ್ರಣಾಳಿಕೆ ಬಿಡುಗಡೆ: ಸಿಎಎ ರದ್ದು ಸೇರಿ ಹಲವು ಭರವಸೆ
ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಬುಧವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬಂದರೆ ಸಿಎಎ ರದ್ದು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಬಿಜೆಪಿ ಸೇರದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ; ಟಿಎಂಸಿ ನಾಯಕರಿಗೆ ತನಿಖಾ ಸಂಸ್ಥೆಗಳಿಂದ ಬೆದರಿಕೆ: ಮಮತಾ ಬ್ಯಾನರ್ಜಿ
ಟಿಎಂಸಿ ನಾಯಕರು ಬಿಜೆಪಿಗೆ ಸೇರಬೇಕು ಇಲ್ಲದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರದ ತನಿಖಾ ಸಂಸ್ಥೆಗಳು ಬೆದರಿಕೆಯೊಡ್ಡುತ್ತಿವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಆರೋಪಿಸಿದ್ದಾರೆ.

Money laundering case: ಟಿಎಂಸಿ ನಾಯಕಿ Mahua Moitra, ಉದ್ಯಮಿ ಹಿರಾನಂದಾನಿ ವಿರುದ್ಧ ED ಕೇಸ್ ದಾಖಲು!
ಕಾಸಿಗಾಗಿ ಪ್ರಶ್ನೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿರುವಂತೆಯೇ ಇತ್ತ ಟಿಎಂಸಿ ನಾಯಕಿ ಮಹುವಾ ಮೋಯಿತ್ರಾಗೆ ಇಡಿ ಸಂಕಷ್ಟ ಆರಂಭವಾಗಿದೆ.

ಮಡಿಕೇರಿ: ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಜೇಬುಗಳ್ಳರ ಕೈಚಳಕ; ಬಿಜೆಪಿ ನಾಯಕರ ಪರ್ಸ್ ಮಾಯ!
ಬುಧವಾರ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದ ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದು, ಮಾಜಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೇರಿದಂತೆ ಕನಿಷ್ಠ ಏಳು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪರ್ಸ್ ಕಳವಾಗಿದೆ.

ಈಶ್ವರಪ್ಪ ಬಂಡಾಯ: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲ...
ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವುದರಿಂದ ಪಕ್ಷದ ಕಾರ್ಯಕರ್ತರು ಅವರನ್ನು ಬೆಂಬಲಿಸಬೇಕೋ ಅಥವಾ ಪಕ್ಷದ ಅಧಿಕೃತ ಅಭ್ಯರ್ಥಿ ಬಿವೈ ರಾಘವೇಂದ್ರ ಅವರನ್ನು ಬೆಂಬಲಿಸಬೇಕೋ ಎಂಬ ಗೊಂದಲದಲ್ಲಿ ಸಿಲುಕಿದ್ದಾರೆ.

ಕಾಸಿಗಾಗಿ ಪ್ರಶ್ನೆ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ
ಕಾಸಿಗಾಗಿ ಪ್ರಶ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

CAA ಭಯ: ಪಶ್ಚಿಮ ಬಂಗಾಳದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು!
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸುಭಾಷ್ಗ್ರಾಮ್ನಲ್ಲಿ 37 ವರ್ಷದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಘೋಷಣೆಯಾದ ನಂತರ ತನ್ನ ಮಗ ಗಾಬರಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರ ತಂದೆ ಹೇಳಿದ್ದಾರೆ.

