toilets

The New Indian Express ವರದಿ ಫಲಶೃತಿ: ಗದಗ ಶಾಲೆಗೆ ಶೌಚಾಲಯ ನಿರ್ಮಿಸಲು ಬೆಂಗಳೂರಿನ ಸಂಸ್ಥೆ ಮುಂದು!
ವಕೀಲ್ ಹೌಸಿಂಗ್ ಡೆವಲಪ್ಮೆಂಟ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಮೊಹ್ಸಿನ್ ಅಲಿ ವಕೀಲ್ ಈ ಲೇಖನ ನೋಡಿ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಿಸುವ ಮೂಲಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಖಾಸಗಿ ಪೆಟ್ರೋಲ್ ಪಂಪ್ಗಳಲ್ಲಿ ಸಾರ್ವಜನಿಕ ಬಳಕೆಗೆ ಶೌಚಾಲಯ: ಕೇರಳ ಹೈಕೋರ್ಟ್ ನಕಾರ
ಗ್ರಾಹಕರ ತುರ್ತು ಅಗತ್ಯಗಳಿಗೆ ಮಳಿಗೆಗಳಲ್ಲಿ ತಾವು ನಿರ್ವಹಿಸುತ್ತಿರುವ ಖಾಸಗಿ ಶೌಚಾಲಯಗಳನ್ನು ಸಾರ್ವಜನಿಕರಿಗೆ ತೆರೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅರ್ಜಿದಾರರು ವಾದಿಸಿದರು.

ಪ್ರಯಾಣ ದರ ಏರಿಕೆ ಬೆನ್ನಲ್ಲೇ, ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ Namma Metro!
12 ನಿಲ್ದಾಣಗಳ 'ಪ್ರವೇಶ ಪ್ರದೇಶಗಳಲ್ಲಿ' ಶೌಚಾಲಯಗಳನ್ನು ಸುಲಭ್ ಇಂಟರ್ನ್ಯಾಷನಲ್ಗೆ ಹಸ್ತಾಂತರಿಸಲಾಗಿದೆ.

ರಾಜ್ಯದ 3,580 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಕೊರತೆ: ವರದಿಯಲ್ಲಿ ಬಹಿರಂಗ
ಶೌಚಾಲಯಗಳು ಮತ್ತು ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಮೂಲಭೂತ ಅಭಿವೃದ್ಧಿ ಹಕ್ಕುಗಳು, ಆದರೆ ಅಭಿವೃದ್ಧಿ ಹಕ್ಕುಗಳಿಗೆ ಸಾಕಷ್ಟು ಹಣದ ಅಗತ್ಯವಿರುತ್ತದೆ.

ರಾಮನಗರ: ಇರುಳಿಗ ಗಿರಿಜನ ಕಾಲೋನಿ ಶೌಚಾಲಯವೇ ಇಲ್ಲ; ಬಹಿರ್ದೆಸೆಗೆ ಮೈಲುಗಟ್ಟಲೆ ಹೋಗುವ ಆದಿವಾಸಿಗಳು!
ನಮ್ಮ ಕಾಲೋನಿ ಕಲ್ಲಿನ ಮೇಲ್ಮೈಯಲ್ಲಿದ್ದು, ಗುಂಡಿ ತೋಡಲು ಅಡಿಗೆ 3 ಸಾವಿರ ರೂ. ಹಣ ಬೇಕಾಗುತ್ತದೆ. ಸೆಪ್ಟಿಕ್ ಟ್ಯಾಂಕ್ಗೆ ಕನಿಷ್ಠ ಎಂಟು ಅಡಿ ಗುಂಡಿ ಬೇಕು, ಅದಕ್ಕಾಗಿ 24 ಸಾವಿರ ರೂ ಹಣ ಬೇಕಾಗುತ್ತದೆ.

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಪ್ರಕರಣ: ಮುಖ್ಯ ಶಿಕ್ಷಕಿ ಬಂಧನ
ಅಂದ್ರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸರ್ಕಾರಿ ಅನುದಾನಿತ, ವಸತಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ
ದೇಶಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿಯನ್ನು ರೂಪಿಸಲು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಮೆಟ್ರೋ ನಿಲ್ದಾಣ ನಿರ್ಮಾಣಕ್ಕಾಗಿ ಶೌಚಾಲಯಗಳ ಬಂದ್ ಮಾಡಿದ ಅಧಿಕಾರಿಗಳು: ಸಾರ್ವಜನಿಕರಿಂದ ಅಪಾರ್ಟ್'ಮೆಂಟ್ ಗೋಡೆ ಬಳಕೆ!
ಕೆಆರ್ ಪುರಂ-ಬೈಯಪ್ಪನಹಳ್ಳಿ ಮಾರ್ಗದ ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡುವ ಸಲುವಾಗಿ ಎರಡು ಸಾರ್ವಜನಿಕ ಶೌಚಾಲಯಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದು, ಅಧಿಕಾರಿಗಳ ಈ ನಡೆ ಇದೀಗ ಸಮೀಪದ ಅಪಾರ್ಟ್ಮೆಂಟ್ ನಿವಾಸಿಗಳ ಮೇಲೆ ಪರಿಣಾಮ ಬೀರಿದೆ.

ಆಗಸ್ಟ್ 15ರೊಳಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ: ಸಿಎಂ ಬೊಮ್ಮಾಯಿ
ಆಗಸ್ಟ್.15ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

