Tokyo 2020

ಭವಾನಿ ದೇವಿ ಕತ್ತಿಗೆ 10 ಕೋಟಿ ರೂ.; ನೀರಜ್ ಜಾವಲಿನ್ ಗೆ 1.20 ಕೋಟಿ ರೂ. ತಲುಪಿದ ಬಿಡ್!
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತ ಪರ ಫೆನ್ಸಿಂಗ್ ನಲ್ಲಿ ಸ್ಪರ್ಧಿಸಿದ ಮೊದಲ ಮಹಿಳೆ ಎಂಬ ಇತಿಹಾಸ ನಿರ್ಮಿಸಿರುವ ಫೆನ್ಸರ್ ಭವಾನಿ ದೇವಿ ಪಂದ್ಯದಲ್ಲೂ ಸೋತರೂ, ಸ್ಪೂರ್ತಿದಾಯಕ ಪ್ರದರ್ಶನ ನೀಡಿ ಇಡೀ ಭಾರತದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಬಾಕ್ಸಿಂಗ್: ಮೇರಿ ಕೋಮ್ ಗೆ ಜಯ, ಟೋಕಿಯೋಗೆ ತೆರಳಲು ಇನ್ನೊಂದೇ ಹೆಜ್ಜೆ!
ಆರು ಬಾರಿ ವಿಶ್ವ ಚಾಂಪಿಯನ್ ಮೇರಿ ಕೋಮ್ ಜೋರ್ಡಾನ್‌ನ ಅಮ್ಮನ್‌ನಲ್ಲಿ ಶನಿವಾರ ನಡೆದ ಏಷ್ಯನ್ / ಓಷಿಯಾನಿಯನ್ ಒಲಿಂಪಿಕ್ ಕ್ವಾಲಿಫೈಯರ್ಸ್‌ನಲ್ಲಿ ನಡೆದ ಆರಂಭಿಕ ಪಂದ್ಯಗಳಲ್ಲಿ ಪ್ರಬಲ ಪ್ರದರ್ಶನ ನೀಡಿ ಎರಡನೇ ಬಾರಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಟೋಕಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್
ಭಾರತದ ಮುಂಚೂಣಿ ಕುಸ್ತಿಪಟು ವಿನೇಶ್ ಫೋಗಾಟ್ ಅವರು 53 ಕೆ.ಜಿ ವಿಭಾಗದಲ್ಲಿ 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮುಂದಿನ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ದೇಶದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ವಿನೇಶ್ ಭಾಜನರಾಗಿದ್ದಾರೆ.

