ದೇಶಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಬಿಜೆಪಿ ನಾಯಕರ ಮನೆಗಳಿಗೆ ಬೆಂಕಿ ಹಚ್ಚಲು ಯತ್ನ, ಘರ್ಷಣೆ ವೇಳೆ ಇಬ್ಬರಿಗೆ ಗಾಯ
ಮಣಿಪುರದ ಇಂಫಾಲದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡ ಗುಂಪೊಂದು ಬೆಂಕಿ ಹಚ್ಚಲು ಯತ್ನ ನಡೆಸಿದೆ. ಈ ವೇಳೆ ಭದ್ರತಾ ಪಡೆ ಹಾಗೂ ಗುಂಪಿನ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಇಬ್ಬರು ನಾಗರೀಕರಿಗೆ ಗಾಯಗಳಾಗಿವೆ ಎಂದು ಶನಿವಾರ ತಿಳಿದುಬಂದಿದೆ.