ರಾಜ್ಯಕಿರುಕುಳ ಆರೋಪ: ಇಡಿ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ನಿರ್ದೇಶಕ ವೈ ಬಿ ಅಶ್ವತ್ಥ ನಾರಾಯಣ ಅವರು ದಾಖಲಿಸಿರುವ ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಅಜಯ್ ಕುಮಾರ್ ವೈದ್ಯ ವಿರುದ್ಧದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.