ರಾಜ್ಯಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ವರದಿ ಸಲ್ಲಿಸುವಂತೆ ಸಚಿವ ಸಿ ಟಿ ರವಿ ಸೂಚನೆ
: ರಾಯಚೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಡಿಸೆಂಬರ್ ವೇಳೆಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ ಟಿ ರವಿ ಹೇಳಿದ್ದಾರೆ.