ದೇಶಕೃಷಿ ಮಸೂದೆ ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿಯಿಂದ ಅ. 4 ರಿಂದ 6 ರವರೆಗೆ ಟ್ರಾಕ್ಟರ್ ರ್ಯಾಲಿ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ನೂತನ ಕೃಷಿ ಮಸೂದೆ ವಿರುದ್ಧದ ಹೋರಾಟದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದು, ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಗಳನ್ನು ನಡೆಸಲಿದ್ದಾರೆ.