ರಾಜ್ಯರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ; ಹಲವೆಡೆ ವಾಹನ ಸಂಚಾರ ನಿರ್ಬಂಧ
ಬೆಂಗಳೂರಿನ ಮಲ್ಲೇಶ್ವರಂ ಹಾಗು ಜೆಪಿ ನಗರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ. ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದ ಸುತ್ತಲೂ ಚಪ್ಪರ ಹಾಕಿ ಹೂವಿನಿಂದ ಅಲಂಕಾರ ಮಾಡಲಾಗಿದೆ.