ರಾಜ್ಯನೂತನ ಸಚಿವರ ಪ್ರಮಾಣ ವಚನ: ಇಂದು ರಾಜಭವನ ಸುತ್ತಮುತ್ತ ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ
ಕಾಂಗ್ರೆಸ್ 24 ಮಂದಿ ಶಾಸಕರು ಇಂದು ಶನಿವಾರ ಬೆಳಗ್ಗೆ 11.45ಕ್ಕೆ ಬೆಂಗಳೂರಿನ ರಾಜಭವನದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಂದರ್ಭದಲ್ಲಿ ರಾಜಭವನದ ಸುತ್ತಮುತ್ತ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.