ರಾಜ್ಯಬೆಂಗಳೂರಿನಲ್ಲಿಂದು ಮೋದಿ: ಮಾಗಡಿ ರಸ್ತೆಯ ನೈಸ್ ಜಂಕ್ಷನ್ ನಿಂದ ಸುಮನಹಳ್ಳಿವರೆಗೆ ರೋಡ್ ಶೋ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ.