Train tragedy
ಒಡಿಶಾ ರೈಲು ದುರಂತ: ನೌಕಾಪಡೆಯಿಂದ ವೈದ್ಯಕೀಯ ತಂಡ ನಿಯೋಜನೆ
ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಭಾರತೀಯ ನೌಕಾಪಡೆಯು ಬಾಲಸೋರ್ ಜಿಲ್ಲೆಯಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಿದೆ.

ಒಡಿಶಾ ರೈಲು ದುರಂತ: ರೈಲ್ವೆ ನೆಟ್ವರ್ಕ್ ಕಾರ್ಯಾಚರಣೆಯಲ್ಲಿ ಯಾವಾಗಲೂ ಸುರಕ್ಷತೆಗೆ ಆದ್ಯತೆ ನೀಡಬೇಕು- ಕಾಂಗ್ರೆಸ್
ಒಡಿಶಾದಲ್ಲಿ ಸಂಭವಿಸಿದ 'ಭಯಾನಕ' ರೈಲು ಅಪಘಾತವು ರೈಲು ಜಾಲದ ಕಾರ್ಯಚಟುವಟಿಕೆಯಲ್ಲಿ ಯಾವಾಗಲೂ ಸುರಕ್ಷತೆ ಮೊದಲ ಆದ್ಯತೆಯಾಗಿರಬೇಕು ಎಂಬುದನ್ನು ತಿಳಿಸಿದೆ ಮತ್ತು ಹಲವಾರು ಕಾನೂನುಬದ್ಧ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ ಪ್ರತಿಪಾದಿಸಿದೆ.

ಒಡಿಶಾ ರೈಲು ದುರಂತ: ಎಂಜಿನ್ ಬದಲಾಗಿದ್ದರಿಂದ ನಾವು ಬದುಕಿದ್ದೇವೆ; ನಟ ಪ್ರೀತಮ್ ಬಿಚ್ಚಿಟ್ಟ ದುರಂತದ ಕ್ಷಣ
ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತದಲ್ಲಿ ಸಿಲುಕಿದ್ದವು.

ಒಡಿಶಾ ರೈಲು ದುರಂತ: ಅಪಘಾತ ಸಂಭವಿಸಿದ ಸ್ಥಳಕ್ಕೆ, ಕಟಕ್ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲಿನ ನಡುವೆ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿಕೆಯಾಗಿದೆ.

ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ವಿರಾಟ್ ಕೊಹ್ಲಿ, ಸಲ್ಮಾನ್ ಖಾನ್ ಸಂತಾಪ
ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 261ಕ್ಕೆ ಏರಿದೆ. ರೈಲ್ವೆ ಇತಿಹಾಸದಲ್ಲಿಯೇ ಭೀಕರ ಅಪಘಾತಗಳಲ್ಲಿ ಒಂದಾದ ಈ ರೈಲು ಅಪಘಾತಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ. ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿದ್ದಾರೆ.

ಒಡಿಶಾ ರೈಲು ಅಪಘಾತ: ಮೃತರ ಸಂಖ್ಯೆ 238ಕ್ಕೆ ಏರಿಕೆ, 900 ಮಂದಿಗೆ ಗಾಯ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 238ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ.

ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಭದ್ರತಾ ವ್ಯವಸ್ಥೆ ಮಾಡಿದ್ದೇವೆ: ಕಟಕ್ ಡಿಸಿಪಿ
ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದ ನಂತರ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಎಲ್ಲಾ ಭದ್ರತಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಕಟಕ್‌ನ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಶನಿವಾರ ಹೇಳಿದ್ದಾರೆ.

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900 ಮಂದಿ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಲ್ಲಿ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 900 ಜನರು ಗಾಯಗೊಂಡಿದ್ದಾರೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ತಿಳಿಸಿದ್ದಾರೆ.

ಒಡಿಶಾ ಭೀಕರ ರೈಲು ಅಪಘಾತ: ಮೃತರ ಸಂಖ್ಯೆ 261ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಪೂರ್ಣ
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ ಮತ್ತು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಆಗ್ನೇಯ ರೈಲ್ವೆ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

