Transfer scam

'ನಾನು ವಿಡಿಯೊ ನೋಡಿಲ್ಲ, ನನಗೆ ಗೊತ್ತಿಲ್ಲ, ನಾನೇಕೆ ಪ್ರತಿಕ್ರಿಯಿಸಲಿ': ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಅವರು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ವೈರಲ್ ಆಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಉಂಟಾಗಿದೆ ಎಂದು ವಿವಾದ ಎದ್ದಿದ್ದು, ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ ಗೃಹ ಸಚಿವ ಡಾ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ.

ವರ್ಗಾವಣೆ ದಂಧೆಯಲ್ಲಿ ಅಪ್ಪ, ಮಗ ತೊಡಗಿಲ್ಲ ಎನ್ನುವುದಾದರೆ ಪ್ರಮಾಣ ಮಾಡಲಿ; ಸಿದ್ದರಾಮಯ್ಯಗೆ ಕೆಎಸ್ ಈಶ್ವರಪ್ಪ ಸವಾಲು
'ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಒಂದು ವೇಳೆ ನಾನು ಹೇಳುತ್ತಿರುವುದು ಸುಳ್ಳು ಎಂದಾದರೆ ಸಿದ್ದರಾಮಯ್ಯ ಅವರು ಕುರುಡುಮಲೆ ಗಣೇಶನ ಮುಂದೆ ನಿಂತು ಪ್ರಮಾಣ ಮಾಡಲಿ' ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಭಾನುವಾರ ಸವಾಲೆಸೆದರು.

ಮೈಸೂರು ಕೃಷಿ ಅಧಿಕಾರಿಗಳ ಬಂಧನ: ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು- ಕುಮಾರಸ್ವಾಮಿ
ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

